HomeKarnatakaBIG NEWS: ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ್; ಶಿಕ್ಷಕ ಅಮಾನತು

BIG NEWS: ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ್; ಶಿಕ್ಷಕ ಅಮಾನತು

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡ ಶಿಕ್ಷಕ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕ ಶಾಂತಮೂರ್ತಿ, ರಾಜ್ಯಕ್ಕಾಗಿ ಮುಖ್ಯಮಂತ್ರಿಗಳು ಮಾಡಿದ ಸಾಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಲಿಸ್ಟ್ ಬಿಡುಗಡೆ ಮಾಡಿದ್ದರು. ಇದರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 2,42,000 ಕೋಟಿ ಸಾಲ ಆಗಿದೆ. ಬಿಟ್ಟಿ ಭಾಗ್ಯ ಕೊಡದೇ ಇನ್ನೇನು ಎಂದು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತುಗೊಳಿಸಿ ಬಿಇಒ ಜಯಪ್ಪ ಆದೇಶ ಹೊರಡಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular