ಕಲಬುರಗಿ: ಹೈಸ್ಕೂಲು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಇಂಗ್ಲೀಷ್ ಶಿಕ್ಷಕ ಅಮಾನತುಗೊಂಡವರು. ಆರೋಪಿ ಶಿಕ್ಷಕ ವಿದ್ಯಾರ್ಥಿನಿಯರನ್ನು ಕಂಪ್ಯೂಟರ್ ರೂಮ್ ಗೆ ಕರೆದು ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿಗಳು ಶಿಕ್ಷಕನಿಗೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದರು. ಆದಾಗ್ಯೂ ತನ್ನ ಹಳೇ ಚಾಳಿ ಮುಂದುವರೆಸಿದ್ದ.
ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆರೋಪಿ ಶಿಕ್ಷಕನನ್ನು ಸೇವೆಯಿಂದ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

