ಆಂಧ್ರಪ್ರದೇಶ : ಶ್ರೀಕಾಕುಳಂ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರಿಂದ ಕಾಲು ಮಸಾಜ್ ಮಾಡಿಸಿಕೊಂಡ ಶಿಕ್ಷಕಿಯನ್ನ ಅಮಾನತು ಮಾಡಲಾಗಿದೆ.
ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲು ಮಸಾಜ್ ಮಾಡುವಂತೆ ಒತ್ತಾಯಿಸಿದ ಆರೋಪದ ಮೇಲೆ ಆಂಧ್ರಪ್ರದೇಶ ಸರ್ಕಾರ ಮಂಗಳವಾರ ಶಾಲಾ ಶಿಕ್ಷಕಿಯನ್ನು ಅಮಾನತುಗೊಳಿಸಿದೆ. ಶಿಕ್ಷಕಿಯನ್ನು ವೈ ಸುಜಾತಾ ಎಂದು ಗುರುತಿಸಲಾಗಿದೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.
ಬಂಡಪಲ್ಲಿ ಗ್ರಾಮದ ಶಾಲೆಯಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ಆಕೆಯ ಕಾಲು ಮಸಾಜ್ ಮಾಡುತ್ತಿರುವಾಗ ಸುಜಾತಾ ತನ್ನ ಕಾಲುಗಳನ್ನು ಚಾಚಿ ಫೋನ್ನಲ್ಲಿ ಮಾತನಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.
ಸುಜಾತಾ ಅವರು ಸರ್ಕಾರಿ ಸೂಚನೆಗಳನ್ನು ಹಲವು ಬಾರಿ ಉಲ್ಲಂಘಿಸಿದ್ದಾರೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ. ಸರ್ಕಾರವು ಕಾಲಕಾಲಕ್ಕೆ ಹೊರಡಿಸುತ್ತಿದ್ದ ಸೂಚನೆಗಳನ್ನು ಉಲ್ಲಂಘಿಸಿದ್ದರಿಂದ ಬಂಡಪಲ್ಲಿಯ ಜಿಟಿಡಬ್ಲ್ಯೂಎಎಚ್ ಶಾಲೆಯ ಎಲ್ಎಫ್ಎಲ್ ಮುಖ್ಯ ಶಿಕ್ಷಕಿ ವೈ ಸುಜಾತಾ ಅವರನ್ನು ಅಮಾನತುಗೊಳಿಸುವುದು ಅಗತ್ಯವಾಗಿದೆ” ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.

