HomeKarnatakaವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯ ಮಾಹಿತಿ: ಶಿಕ್ಷಕ ಮಿತ್ರ ಆಪ್ ಮೂಲಕ ಮಾಹಿತಿ ಸಲ್ಲಿಕೆಗೆ ಸೂಚನೆ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯ ಮಾಹಿತಿ: ಶಿಕ್ಷಕ ಮಿತ್ರ ಆಪ್ ಮೂಲಕ ಮಾಹಿತಿ ಸಲ್ಲಿಕೆಗೆ ಸೂಚನೆ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಅನುಮತಿ ದೊರೆತಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಕರ ಇತ್ತೀಚಿನ ಸೇವಾ ವಿವರಗಳನ್ನು ಪರಿಶೀಲಿಸಿ ಜೂನ್ 3ರ ಒಳಗೆ ಶಿಕ್ಷಕ ಮಿತ್ರ ಅಪ್ಲಿಕೇಶನ್ ನಲ್ಲಿ ಅಪ್ಡೇಟ್ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಭಾರ ಆಯುಕ್ತರಾದ ಬಿ.ಬಿ. ಕಾವೇರಿ ತಿಳಿಸಿದ್ದಾರೆ.

ಪ್ರೌಢಶಾಲೆ ಮುಖ್ಯ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಚೇರಿ ಮುಖ್ಯಸ್ಥರು ಸೇವಾ ವಿವರಗಳ ಅಪ್ಡೇಟ್ ಮಾಡುವ ಜವಾಬ್ದಾರಿ ಹೊಂದಿರುತ್ತಾರೆ. ನಿಖರವಾದ ಸೇವಾ ವಿವರ ಅಪ್ಡೇಟ್ ಮಾಡದಿದ್ದಲ್ಲಿ ಸಂಬಂಧಿಸಿದ ಬಡಾವಣೆ ಅಧಿಕಾರಿಗಳನ್ನು ಹೊಣೆಯಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕರ ಸರಿಯಾದ ಕೆಜಿಐಡಿ ನಂಬರ್ ನಮೂದು, ಶಿಕ್ಷಕರ ಹೆಸರು ಕ್ರಮಬದ್ಧವಾಗಿ ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಇದೆಯೇ?, ಶಿಕ್ಷಕರ ಜನ್ಮ ದಿನಾಂಕ, ಸೇವೆಗೆ ಸೇರಿದ ದಿನಾಂಕ, ಪ್ರಸ್ತುತ ವೃಂದಕ್ಕೆ ಸೇರಿದ ದಿನಾಂಕ, ಸೇವಾ ವಿವರದಲ್ಲಿ ಯಾವುದೇ ಕಲಂ ಖಾಲಿ ಇಲ್ಲದಂತೆ ತುಂಬಿರುವುದು, ಅನುದಾನಿತ ಶಿಕ್ಷಕರು, ಶಾಲಾ ಶಿಕ್ಷಕರು ಎಂದು ನಮೂದಾಗಿದೆಯೇ? ಪ್ರಾಥಮಿಕ ಶಾಲಾ, ಪ್ರೌಢಶಾಲೆ ಶಿಕ್ಷಕರೆಂದು ನಮೂದಿಸಲಾಗಿದೆಯೇ ಕಾರ್ಯ ನಿರ್ವಹಿಸುತ್ತಿರುವ ವಲಯಗಳ ಮಾಹಿತಿ ಈಗ ಎಲ್ಲಾ ವಿವರಗಳನ್ನು ಗಮನಿಸುವಂತೆ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular