HomeKarnatakaಹೆಚ್ಚುವರಿ ಶಿಕ್ಷಕರ ವರ್ಗಾವಣೆ ವಿರೋಧಿಸಿ ತರಗತಿ ಬಹಿಷ್ಕಾರ, ಧರಣಿಗೆ ಮುಂದಾದ ಶಿಕ್ಷಕರು

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವಿರೋಧಿಸಿ ತರಗತಿ ಬಹಿಷ್ಕಾರ, ಧರಣಿಗೆ ಮುಂದಾದ ಶಿಕ್ಷಕರು

ಬೆಂಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆ, ಚುನಾವಣೆ ಕೆಲಸಕ್ಕೆ ಶಿಕ್ಷಕರ ಬಳಕೆ ಬಗ್ಗೆ ಇಲಾಖೆ ಮತ್ತು ಶಿಕ್ಷಣ ಸಚಿವರ ನಡೆಗೆ ರಾಜ್ಯ ಸರ್ಕಾರ ಶಿಕ್ಷಕರ ಸಂಘ ವಿರೋಧ ವ್ಯಕ್ತಪಡಿಸಿದೆ.

ತರಗತಿಗಳನ್ನು ಬಹಿಷ್ಕರಿಸಿ ಸರ್ಕಾರಿ ಶಾಲೆ ಶಿಕ್ಷಕರು ಧರಣಿಗೆ ಮುಂದಾಗಿದ್ದಾರೆ. ಈಗಾಗಲೇ ಎಸ್ಎಸ್ಎಲ್ಸಿ, ಪಿಯುಸಿ 5 ಮತ್ತು 8ನೇ ತರಗತಿ ಪರೀಕ್ಷೆ ನಿಗದಿಯಾಗಿದೆ. ಸಾಲು ಸಾಲು ಪರೀಕ್ಷೆಗಳ ನಡುವೆ ಶಿಕ್ಷಕರ ಸಂಘ ಧರಣಿಗೆ ಮುಂದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣೆ ಕೆಲಸಕ್ಕೆ ಕಡ್ಡಾಯ ಶಿಕ್ಷಕರ ಬಳಕೆ ವಿಚಾರ ಹಾಗೂ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೈ ಬಿಡುವಂತೆ ಆಗ್ರಹಿಸಲಾಗಿದೆ. ಶಿಕ್ಷಣ ಇಲಾಖೆಗೆ ರಾಜ್ಯ ಶಿಕ್ಷಕರ ಸಂಘದಿಂದ ಎರಡು ದಿನ ಗಡುವು ನೀಡಲಾಗಿದೆ. ಎರಡು ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ಧರಣಿ ನಡೆಸಲಾಗುವುದು. ಸರ್ಕಾರಿ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗೇಗೌಡ, ಈ ಬಗ್ಗೆ ಸಭೆ ನಡೆಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular