HomeKarnatakaಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ವಲಯವಾರು ವರ್ಗಾವಣೆಗೆ ಅರ್ಹರಾದ ಶಿಕ್ಷಕರ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿತ್ತು. ವರ್ಗಾವಣೆಗೆ ಅರ್ಹರಿದ್ದ ಹಲವು ಶಿಕ್ಷಕರ ಹೆಸರು ಅಪ್ ಡೇಟ್ ಆಗದಿರುವುದನ್ನು ಗಮನಿಸಿ ವರ್ಗಾವಣೆ ಪ್ರಕ್ರಿಯೆಗೆ ಸಮಯ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

ಏಪ್ರಿಲ್ 19ರ ರಾತ್ರಿ 10.30ರೊಳಗೆ ಬಿಇಒಗಳು ವರ್ಗಾವಣೆಗೆ ಅರ್ಹರಾದ ಶಿಕ್ಷಕರ ಮಾಹಿತಿಯನ್ನು ಅಪ್ಡೇಟ್ ಮಾಡಬೇಕು. ನಂತರ ಅಪ್ಡೇಟ್ ಮಾಡಲು ಅವಕಾಶವಿರುವುದಿಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 20ರಂದು ವಲಯ ವರ್ಗಾವಣೆಗೆ ಅರ್ಹರಾದ ಶಿಕ್ಷಕರ ತಾತ್ಕಾಲಿಕ ಕರಡು ಪಟ್ಟಿಯನ್ನು ಬಿಇಒಗಳು ಪ್ರಕಟಿಸಬೇಕು. ಏಪ್ರಿಲ್ 20 ರಿಂದ 22 ರವರೆಗೆ ಪ್ರಕಟಿತ ತಾತ್ಕಾಲಿಕ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ.

ಏ. 23ರಂದು ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಸಲ್ಲಿಸಿದ ಆಕ್ಷೇಪಣೆ ದಾಖಲೆಗಳನ್ನು ಆನ್ಲೈನ್ ನಲ್ಲಿ ಪರಿಶೀಲಿಸಿ ತೀರ್ಮಾನ ಪ್ರಕಟಿಸಲು ಬಿಇಒಗಳು ಮತ್ತು ಡಿಡಿಪಿಐ ಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಏಪ್ರಿಲ್ 24ರಂದು ವಲಯ ವರ್ಗಾವಣೆಗೆ ಅರ್ಹರಾದ ಶಿಕ್ಷಕರ ಆದ್ಯತೆಯ ಕರಡುಪಟ್ಟಿ ಪ್ರಕಟಿಸಲು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular