HomeKarnatakaಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಬಗ್ಗೆ ಮುಖ್ಯ ಮಾಹಿತಿ: ಸೇವಾವಧಿಯಲ್ಲಿ ಒಮ್ಮೆ ಮಾತ್ರ ಆದ್ಯತೆ ವರ್ಗಾವಣೆ

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಬಗ್ಗೆ ಮುಖ್ಯ ಮಾಹಿತಿ: ಸೇವಾವಧಿಯಲ್ಲಿ ಒಮ್ಮೆ ಮಾತ್ರ ಆದ್ಯತೆ ವರ್ಗಾವಣೆ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ಘಟಕ ಅಥವಾ ವಿಭಾಗದ ಹೊರಗಿನ ಪರಸ್ಪರ ವರ್ಗಾವಣೆಗೆ ಸೇವಾವಧಿಯಲ್ಲಿ ಒಮ್ಮೆ ಮಾತ್ರ ಶಿಕ್ಷಕರಿಗೆ ಆದ್ಯತೆಯ ವರ್ಗಾವಣೆ ಅವಕಾಶವಿದೆ.

ಪರಸ್ಪರ ವರ್ಗಾವಣೆಗೆ ಸೇವಾವಧಿ ಪ್ರಕರಣದಲ್ಲಿ ಕನಿಷ್ಠ ಐದು ವರ್ಷ ಹಾಗೂ ಕರ್ತವ್ಯ ನಿರತ ಸ್ಥಳದಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿರುವವರನ್ನು ಮಾತ್ರ ಪರಿಗಣಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೇವಾವಧಿಯಲ್ಲಿ ಒಂದು ಸಲ ಮಾತ್ರ ಆದ್ಯತೆಯನ್ನು ಕ್ಲೇಮ್ ಮಾಡಲು ಅವಕಾಶವಿದ್ದು, ಈ ನಿಯಮ ಹೆಚ್ಚುವರಿ ವರ್ಗಾವಣೆಗೆ ಅನ್ವಯವಾಗುವುದಿಲ್ಲ. ಪತಿ-ಪತ್ನಿ ಪ್ರಕರಣದಲ್ಲಿ ಒಬ್ಬರು ಜಿಲ್ಲೆಯಿಂದ ಹೊರಗೆ ಕೆಲಸ ನಿರ್ವಹಿಸುತ್ತಿದ್ದಲ್ಲಿ ಅಂತವರಿಗೆ ಹೆಚ್ಚುವರಿಯಲ್ಲಿ ಆದ್ಯತೆ ಪರಿಗಣಿಸುವುದು, ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪದವೀಧರ ಶಿಕ್ಷಕರಿಗೆ ಅವರ ನೇಮಕಾತಿ ಆದೇಶದಲ್ಲಿ ಐದು ವರ್ಷ ಅಥವಾ 10 ವರ್ಷ ಅದೇ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುವ ಷರತ್ತು ವಿಧಿಸಿದ್ದಲ್ಲಿ ನೇಮಕಾತಿ ಆದೇಶ ಪರಿಗಣಿಸಬೇಕು. ಸೇವಾ ಹಿರಿತನ ಪರಿಗಣಿಸುವ ಸಂದರ್ಭದಲ್ಲಿ ಅನೇಕರು ಒಂದೇ ದಿನ ಕರ್ತವ್ಯಕ್ಕೆ ಹಾಜರಾಗಿದ್ದಲ್ಲಿ ಜನ್ಮ ದಿನಾಂಕವನ್ನು ಪರಿಗಣಿಸಿ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular