HomeKarnataka15 ಸಾವಿರ ಹೊಸ ಶಿಕ್ಷಕರು, ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್: ಅನುಮತಿ ನಿರಾಕರಿಸಿದ ಚುನಾವಣೆ...

15 ಸಾವಿರ ಹೊಸ ಶಿಕ್ಷಕರು, ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್: ಅನುಮತಿ ನಿರಾಕರಿಸಿದ ಚುನಾವಣೆ ಆಯೋಗ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಅನುಮತಿ ನೀಡಲು ಚುನಾವಣಾ ಆಯೋಗ ನಿರಾಕರಿಸಿದ್ದು, ವರ್ಗಾವಣೆಗಾಗಿ ಕಾಯುತ್ತಿದ್ದ ಶಿಕ್ಷಕರಿಗೆ ಮತ್ತೆ ನಿರಾಸೆ ಎದುರಾಗಿದೆ.

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣದಿಂದ ಚುನಾವಣಾ ಆಯೋಗ ಶಿಕ್ಷಕರ ವರ್ಗಾವಣೆಗೆ ಅನುಮತಿ ನೀಡಲು ನಿರಾಕರಿಸಿದೆ. ಇದರಿಂದಾಗಿ ವರ್ಗಾವಣೆಗೆ ಕಾಯುತ್ತಿದ್ದ ಶಿಕ್ಷಕರ ಜೊತೆಗೆ 15,000 ಹೊಸ ಶಿಕ್ಷಕರಿಗೆ ಸ್ಥಳ ನಿಯೋಜನೆ ಮೇಲೆಯೂ ಪರಿಣಾಮ ಉಂಟಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಕರ ವರ್ಗಾವಣೆಗೆ ಆಯೋಗದ ಅನುಮತಿ ಪಡೆದು ನಂತರ ವರ್ಗಾವಣೆ ಪ್ರಕ್ರಿಯೆ ನಡೆಸಲು ತೀರ್ಮಾನ ಕೈಗೊಂಡಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿತ್ತು. ಚುನಾವಣಾ ನೀತಿ ಸಂಹಿತೆ ಕಾರಣದಿಂದ ಶಿಕ್ಷಕರ ವರ್ಗಾವಣೆಗೆ ಆಯೋಗ ಅನುಮತಿ ನೀಡಿಲ್ಲ. ಹೊಸ ಸರ್ಕಾರ ಬರುವವರೆಗೆ ವರ್ಗಾವಣೆ ಪ್ರಕ್ರಿಯೆ ನನೆಗುದಿಗೆ ಬೀಳಲಿದೆ. ಇದರೊಂದಿಗೆ 15,000 ಶಿಕ್ಷಕರ ಸ್ಥಳ ನಿಯೋಜನೆ ಮೇಲೆಯೂ ಪರಿಣಾಮ ಉಂಟಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular