HomeKarnatakaಶಿಕ್ಷಕರಿಗೆ ಗುಡ್ ನ್ಯೂಸ್: ಚುನಾವಣಾ ಆಯೋಗದ ಅನುಮತಿ ಪಡೆದು ವರ್ಗಾವಣೆಗೆ ಮರು ಚಾಲನೆ

ಶಿಕ್ಷಕರಿಗೆ ಗುಡ್ ನ್ಯೂಸ್: ಚುನಾವಣಾ ಆಯೋಗದ ಅನುಮತಿ ಪಡೆದು ವರ್ಗಾವಣೆಗೆ ಮರು ಚಾಲನೆ

ಬೆಂಗಳೂರು: ಚುನಾವಣೆ ಆಯೋಗದ ಅನುಮತಿಯೊಂದಿಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

ವಿಧಾನಸಭೆ ಚುನಾವಣೆ ಸಮೀಪದದಲ್ಲಿ ಇರುವುದರಿಂದ ನೀತಿ ಸಂಹಿತೆ ಜಾರಿಯಾದರೆ ವರ್ಗಾವಣೆ ನಡೆಯುವುದಿಲ್ಲ ಎನ್ನುವ ಆತಂಕ ಶಿಕ್ಷಕರಲ್ಲಿತ್ತು. ಸಂಪುಟ ಸಭೆಯಲ್ಲಿ ಆಯೋಗದ ಅನುಮತಿ ಪಡೆದು ವರ್ಗಾವಣೆಗೆ ಮರು ಚಾಲನೆ ನೀಡಲು ಒಪ್ಪಿಗೆ ನೀಡಲಾಗಿದ್ದು, ಇದರಿಂದ ಚುನಾವಣೆ ನೀತಿ ಸಂಹಿತೆ ಜಾರಿಯಾದರೂ ಶಿಕ್ಷಕರ ವರ್ಗಾವಣೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ನಿರ್ಧಾರದಿಂದ ಶಿಕ್ಷಕರ ವರ್ಗಾವಣೆಯ ಕನಸು ನನಸಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದು, ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular