HomeKarnatakaವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ಪುನಾರಂಭಕ್ಕೆ ವೇಳಾಪಟ್ಟಿ ಶೀಘ್ರ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ಪುನಾರಂಭಕ್ಕೆ ವೇಳಾಪಟ್ಟಿ ಶೀಘ್ರ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪುನಾರಂಬಿಸಲು ಸರ್ಕಾರ ಒಪ್ಪಿಗೆ ನೀಡಿದೆ.

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ವರ್ಗಾವಣೆ ಪ್ರಕ್ರಿಯೆ ಮತ್ತೆ ಆರಂಭಿಸಲು ಸರ್ಕಾರ ಒಪ್ಪಿಗೆ ನೀಡಿದ್ದು, ಒಂದೆರಡು ದಿನಗಳಲ್ಲಿ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರ್ಗಾವಣೆಗೆ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ. 2023 -24ನೇ ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲು ಶಿಕ್ಷಕರ ವರ್ಗಾವಣೆ ಪೂರ್ಣಗೊಳಿಸಲು ಶಿಕ್ಷಣ ಇಲಾಖೆ ವತಿಯಿಂದ ಫೆಬ್ರವರಿಯಲ್ಲಿ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು.

75,000ಕ್ಕೂ ಅಧಿಕ ಶಿಕ್ಷಕರು ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದು, ಮೊದಲಿಗೆ ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಮತ್ತು ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ದಿನಾಂಕ ನಿಗದಿಪಡಿಸಲಾಗಿತ್ತು. ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದರಿಂದ ಚುನಾವಣಾ ಆಯೋಗದ ನಿರ್ದೇಶನದಂತೆ ತಾತ್ಕಾಲಿಕವಾಗಿ ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು.

ಈಗ ಶಿಕ್ಷಕರ ಸಂಘದ ಮನವಿ ಮೇರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ವರ್ಗಾವಣೆ ಪ್ರಕ್ರಿಯೆ ಪುನಾರಾರಂಭಕ್ಕೆ ಸೂಚನೆ ನೀಡಿ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಪರಿಷ್ಕೃತ ವೇಳಾಪಟ್ಟಿ ಸಿದ್ದಪಡಿಸಲಾಗುತ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆಗೆ ಶೀಘ್ರವೇ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular