HomeKarnatakaಇಂದು ಹೆಚ್ಚುವರಿ ಶಿಕ್ಷಕರ ಜೇಷ್ಠತಾ ಪಟ್ಟಿ ಪ್ರಕಟ: ವಿರೋಧದ ನಡುವೆಯೂ 10,500 ಶಿಕ್ಷಕರ ವರ್ಗಾವಣೆ...?

ಇಂದು ಹೆಚ್ಚುವರಿ ಶಿಕ್ಷಕರ ಜೇಷ್ಠತಾ ಪಟ್ಟಿ ಪ್ರಕಟ: ವಿರೋಧದ ನಡುವೆಯೂ 10,500 ಶಿಕ್ಷಕರ ವರ್ಗಾವಣೆ…?

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆ ಮರು ಹಂಚಿಕೆ ಕೌನ್ಸೆಲಿಂಗ್ ಗೆ ಅರ್ಹರಾದ ಹೆಚ್ಚುವರಿ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಇಂದು ಪ್ರಕಟಿಸಲಾಗುವುದು. ನಾಳೆಯಿಂದ ಬ್ಲಾಕ್ ಹಂತದಲ್ಲಿ ಮರು ಹೊಂದಾಣಿಕೆ ಕೌನ್ಸೆಲಿಂಗ್ ನಡೆಸಲಾಗುವುದು.

10,500 ಹೆಚ್ಚುವರಿ ಶಿಕ್ಷಕರನ್ನು ಗುರುತಿಸಲಾಗಿದೆ. ಈ ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಿ ತಾಲೂಕಿನೊಳಗೆ ವರ್ಗಾವಣೆ ಮಾಡಲಾಗುವುದು. ಹೆಚ್ಚುವರಿ ಶಿಕ್ಷಕರ ವರ್ಗಾವಣೆ ತಾಂತ್ರಿಕ ಸಮಸ್ಯೆ ಪರಿಹರಿಸಿ ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮೊದಲು ಬಡ್ತಿ ನೀಡಬೇಕು. ಇಲ್ಲವಾದಲ್ಲಿ ವರ್ಗಾವಣೆ ಪ್ರಕ್ರಿಯೆ ನಿಲ್ಲಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವಿರೋಧ ವ್ಯಕ್ತಪಡಿಸಿದೆ. ಇದರ ನಡುವೆಯೂ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular