ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ: ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಸಮಸ್ಯೆ ಹಿನ್ನೆಲೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಂಡಿದ್ದು, ಶಿಕ್ಷಕರ ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಿಸಲಾಗಿದೆ.

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ಶಿಕ್ಷಕರ ಮಾಹಿತಿಯನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ಇದರೊಂದಿಗೆ ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಜನವರಿ 30 ಕೊನೆಯ ದಿನವಾಗಿತ್ತು. ಆಡಳಿತಾತ್ಮಕ ಹಿತದೃಷ್ಟಿಯಿಂದ ಫೆಬ್ರವರಿ 4ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.

ಹೆಚ್ಚುವರಿ ಪ್ರಕ್ರಿಯೆ, ಕೋರಿಕೆ, ಪರಸ್ಪರ ವರ್ಗಾವಣೆ ಕುರಿತು ವಿಸ್ತೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು. ಡಿಸೆಂಬರ್ 26ರಂದು ಹೊರಡಿಸಲಾದ ಎಲ್ಲಾ ಮಾರ್ಗಸೂಚಿಗಳು ಯಥಾವತ್ತಾಗಿರುತ್ತವೆ ಎಂದು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆಗೆ ಅಗತ್ಯ ಪೂರ್ವಭಾವಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಶಿಕ್ಷಕರು ತಮ್ಮ ಮಾಹಿತಿಯನ್ನು ಶಿಕ್ಷಕ ಮಿತ್ರ ತಂತ್ರಾಂಶದಲ್ಲಿ ಫೆಬ್ರವರಿ 4ರವರೆಗೆ ಅಪ್ಲೋಡ್ ಮಾಡಬಹುದು. ಶಿಕ್ಷಕರ ಆದ್ಯತೆ ಅಥವಾ ವಿನಾಯಿತಿಗೆ ನಿಗದಿಪಡಿಸಲಾದ ದಾಖಲೆಗಳನ್ನು ವರ್ಗಾವಣೆ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲು ಅಥವಾ ಸರಿಪಡಿಸಲು ಫೆಬ್ರವರಿ 8 ಕೊನೆಯ ದಿನವಾಗಿದ್ದು, ಶಿಕ್ಷಕರು ಸಲ್ಲಿಸಿದ ವೈದ್ಯಕೀಯ ಪ್ರಮಾಣ ಪತ್ರಗಳ ನೈಜತೆ ಮರುಪರಿಶೀಲನೆ ಸೇರಿದಂತೆ ಶಿಕ್ಷಕರು ಸಲ್ಲಿಸದ ದಾಖಲೆಗಳ ಪರಿಶೀಲನೆ ಮಾಡಿ ತಂತ್ರಾಂಶದಲ್ಲಿ ದೃಢೀಕರಿಸಿ ಅನುಮೋದಿಸಲು ಫೆಬ್ರವರಿ 10 ಕೊನೆಯ ದಿನವಾಗಿದೆ. ಅಂತಿಮ ದಿನಾಂಕದ ನಂತರ ಯಾವುದೇ ತಿದ್ದುಪಡಿಗೆ ಅವಕಾಶವಿಲ್ಲ. ನಿಗದಿತ ಅವಧಿ ಮೀರಿದ ನಂತರ ತಿದ್ದುಪಡಿ ಕೋರಿ ಬರುವ ಮನವಿ ಪರಿಗಣಿಸುವುದಿಲ್ಲವೆಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read