HomeLatest Newsಸಮೀಕ್ಷೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಕ ಸಾವು

ಸಮೀಕ್ಷೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಕ ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯದ ವೇಳೆ ಪ್ರಜ್ಞೆ ತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಕ ಶರಣಪ್ಪ ಯಮನಪ್ಪ ಚಲವಾದಿ ಶನಿವಾರ ಮೃತಪಟ್ಟಿದ್ದಾರೆ.

ಬೀಳಗಿ ತಾಲೂಕಿನ ಬೂದಿಹಾಳ ಎಸ್‌ಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾಗಿದ್ದ ಶರಣಪ್ಪ ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದರು. ಅಕ್ಟೋಬರ್ 9ರಂದು ಸಮೀಕ್ಷಾ ಕಾರ್ಯದ ವೇಳೆ ಪ್ರಜ್ಞೆ ತಪ್ಪಿ ಬಿದ್ದಿದ್ದ ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದ್ದು. ರಕ್ತದೊತ್ತಡ ಕಡಿಮೆಯಾಗಿ ಮೃತಪಟ್ಟಿದ್ದಾರೆ.

 ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಮೃತರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ನೀಡುವಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular