BREAKING : ಕೋಲಾರದಲ್ಲಿ ‘ಜಾತಿ ಗಣತಿ’ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ.!

ಕೋಲಾರ : ಕೋಲಾರದಲ್ಲಿ ಜಾತಿ ಗಣತಿ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾಗಿದ್ದಾರೆ.

ಕೋಲಾರ ತಾಲೂಕಿನ ಬಿ ಹೊಸಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಅಖ್ತರ್ ಬೇಗಂ ಕೋಲಾರದ ಮಹಾಲಕ್ಷ್ಮಿ ಬಡಾವಣೆಯ ನಿವಾಸಿಯಾಗಿದ್ದರು.

ನರಸಾಪುರದಲ್ಲಿ ಸಮೀಕ್ಷೆ ಕಾರ್ಯ ನಡೆಸಿದ ಬಳಿಕ ನಾಪತ್ತೆಯಾಗಿದ್ದರು. 2 ದಿನಗಳಿಂದ ನಾಪತ್ತೆಯಾಗಿದ್ದ ಶಿಕ್ಷಕಿ ಸುಳಿವೇ ಇರಲಿಲ್ಲ. ಈ ಸಂಬಂಧ ಕೋಲಾರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ಕೂಡ ದಾಖಲಾಗಿತ್ತು. ಆದರೀಗ ಅವರ ಶವ ಪತ್ತೆಯಾಗಿದೆ. ಕೆಜಿಎಫ್ ತಾಲೂಕಿನ ಐಪಲ್ಲಿ ಕೆರೆಯಲ್ಲಿ ಅಖ್ತರ್ ಶವ ಪತ್ತೆಯಾಗಿದೆ. ಶಿಕ್ಷಕಿಯನ್ನು ಯಾರಾದರೂ ಕೊಲೆ ಮಾಡಿದ್ರಾ ಅವರೇ ಆತ್ಮಹತ್ಯೆ ಮಾಡಿಕೊಂಡರಾ ಎಂಬುದು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read