HomeLatest Newsಶಿಕ್ಷಕರಿಗೆ ನಾಲೆಡ್ಜ್ ಇರಲ್ಲ: ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಿತ ಹೇಳಿಕೆಗೆ ಭಾರೀ...

ಶಿಕ್ಷಕರಿಗೆ ನಾಲೆಡ್ಜ್ ಇರಲ್ಲ: ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಿತ ಹೇಳಿಕೆಗೆ ಭಾರೀ ವಿರೋಧ

ಕೊಪ್ಪಳ: ಶಿಕ್ಷಕರಿಗೆ ನಾಲೆಡ್ಜ್ ಇರಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ ಅಭಿನಂದನಾ ಸಭೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಕರೊಬ್ಬರ ಪ್ರಶ್ನೆಗೆ ಉತ್ತರಿಸುತ್ತಿದ್ದ ಷಡಕ್ಷರಿ ಅವರು ಈ ಕುರಿತಾಗಿ ಹೇಳಿಕೆ ನೀಡಿದ್ದಾರೆ.

ಶಿಕ್ಷಕ ಬಾಳಪ್ಪ ಕಾಳೆ ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಶಿಕ್ಷಕರಿಗೆ ನಾಲೆಡ್ಜ್ ಇರಲ್ಲ ಎಂದು ಷಡಕ್ಷರಿ ಹೇಳಿದ್ದು, ಇದಕ್ಕೆ ಬಾಳಪ್ಪ ಕಾಳೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಾನು ಹೇಳುವುದನ್ನು ಕೇಳಿಸಿಕೊಳ್ಳಿ, ಅಕಾಡೆಮಿಕ್ ನಾಲೆಡ್ಜ್ ಬೇರೆ, ಅಡ್ಮಿನಿಸ್ಟ್ರೇಷನ್ ನಾಲೆಡ್ಜ್ ಬೇರೆ. ನಾನು ಅಡ್ಮಿನಿಸ್ಟ್ರೇಷನ್ ಬಗ್ಗೆ ಮಾತನಾಡುತ್ತಿದ್ದೇನೆ. ಕೆಲವರಿಗೆ ಕಂಪ್ಯೂಟರ್ ನಾಲೆಡ್ಜ್ ಇರುವುದಿಲ್ಲ. ಇದರಿಂದ ಸೆನ್ಸಸ್ ವೇಳೆ ಎಷ್ಟು ಸಮಸ್ಯೆಯಾಗಿದೆ ಎಂದು ಷಡಕ್ಷರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರ ಹೇಳಿಕೆಗೆ ಶಿಕ್ಷಕರ ವಲಯದಿಂದ ಆಕ್ಷೇಪ ವ್ಯಕ್ತವಾಗಿದೆ. ಷಡಕ್ಷರಿ ಅವರು ಶಿಕ್ಷಕರಿಗೆ ನಾಲೆಡ್ಜ್ ಇರಲ್ಲ ಎಂದು ಅಪ್ರಬುದ್ಧ ಹೇಳಿಕೆ ನೀಡಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular