HomeLatest News3 ದಿನ ವಿರಾಮದ ಬಳಿಕ ಅ. 23 ರಿಂದ ಪುನಾರಂಭವಾಗಲಿರುವ ಸಮೀಕ್ಷೆ ಕಾರ್ಯದಿಂದ ಶಿಕ್ಷಕರಿಗೆ ವಿನಾಯಿತಿ

3 ದಿನ ವಿರಾಮದ ಬಳಿಕ ಅ. 23 ರಿಂದ ಪುನಾರಂಭವಾಗಲಿರುವ ಸಮೀಕ್ಷೆ ಕಾರ್ಯದಿಂದ ಶಿಕ್ಷಕರಿಗೆ ವಿನಾಯಿತಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪೂರ್ಣಗೊಳಿಸಲು ಅಕ್ಟೋಬರ್ 31ರವರೆಗೆ ಕಾಲಾವಕಾಶ ವಿಸ್ತರಿಸಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಕ್ಟೋಬರ್ 20 ರಿಂದ 22 ರವರೆಗೆ ದೀಪಾವಳಿ ರಜೆ ಹಿನ್ನೆಲೆಯಲ್ಲಿ ಸಮೀಕ್ಷೆ ಕಾರ್ಯಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿದೆ. ಅ. 23ರಿಂದ 31ರವರೆಗೆ ಸಮೀಕ್ಷೆ ನಡೆಯಲಿದೆ. ಬೆಂಗಳೂರು ನಗರ ಒಳಗೊಂಡಂತೆ ಬಾಕಿ ಇರುವ ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ತಿಳಿಸಲಾಗಿದೆ.

ಬಾಕಿ ಇರುವ ಸಮೀಕ್ಷೆ ಪೂರ್ಣಗೊಳಿಸಲು ಎಲ್ಲಿಯೂ ಶಿಕ್ಷಕರನ್ನು ಬಳಕೆ ಮಾಡುವಂತಿಲ್ಲ. ಇತರೆ ಸರ್ಕಾರಿ ಸಿಬ್ಬಂದಿ ನಿಯೋಜಿಸಿ ಸಮೀಕ್ಷೆ ಕೈಗೊಳ್ಳಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೂರ್ಣ ಪ್ರಮಾಣದಲ್ಲಿ ಸಮೀಕ್ಷೆ ಯಶಸ್ವಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಸರಾ ರಜೆ ಮುಗಿದು ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರನ್ನು ಬಳಕೆ ಮಾಡಿಕೊಳ್ಳದಿರಲು ತೀರ್ಮಾನಿಸಲಾಗಿದೆ ಎಂದು ಸಭೆಯ ಬಳಿಕ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular