ಶಾಲೆಗೆ ತಡವಾಗಿ ಬಂದ ಶಿಕ್ಷಕರಿಗೆ ಶಾಕ್: ಒಂದು ದಿನದ ವೇತನ ಕಡಿತ

ಹಾಸನ: ಶಾಲೆಗೆ ತಡವಾಗಿ ಬಂದ ಶಿಕ್ಷಕರ ಒಂದು ದಿನದ ವೇತನ ಕಡಿತಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶಿಸಿದ್ದಾರೆ.

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಬೈಚನಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಗೆ ಡಿಡಿಪಿಐ ಜವರೇಗೌಡ ಭೇಟಿ ನೀಡಿದ ವೇಳೆ ಶಾಲಾ ಪ್ರಾರ್ಥನಾ ಸಮಯದಲ್ಲಿ ಗೈರಾಗಿದ್ದ ಮೂವರು ಶಿಕ್ಷಕರ ಒಂದು ದಿನದ ವೇತನ ಕಡಿತಗೊಳಿಸಿ ಆದೇಶಿಸಲಾಗಿದೆ.

ಡಿಡಿಪಿಐ ಜವರೇಗೌಡ ಅವರು ಗುರುವಾರ ಬೆಳಗ್ಗೆ 10 ಗಂಟೆಗೆ ಬೈಚನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ದಿಢೀರ್ ಭೇಟಿ ನೀಡಿ ಶಾಲಾ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಸೇರಿ ಮೂವರು ತಡವಾಗಿ ಶಾಲೆಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಒಂದು ದಿನದ ವೇತನ ಕಡಿತಗೊಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read