HomeKarnatakaಬಡ್ತಿ ಪಡೆಯಲು ಶಿಕ್ಷಕರು 12 ವರ್ಷ ಸೇವಾವಧಿ ಪೂರ್ಣಗೊಳಿಸಿರಬೇಕು: ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟ

ಬಡ್ತಿ ಪಡೆಯಲು ಶಿಕ್ಷಕರು 12 ವರ್ಷ ಸೇವಾವಧಿ ಪೂರ್ಣಗೊಳಿಸಿರಬೇಕು: ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಪದೋನ್ನತಿ ಹೊಂದಲು ಶಿಕ್ಷಕರು ಕನಿಷ್ಠ 12 ವರ್ಷಗಳ ಸೇವಾವಧಿ ಪೂರೈಸಿರಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಪ್ರಾಥಮಿಕ ಶಾಲಾ ಶಿಕ್ಷಕರು, ಪದವೀಧರ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ ಬಡ್ತಿ ಕುರಿತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಹೊಸ ಮಾರ್ಗಸೂಚಿ ಪ್ರಕಾರ 3 ಹುದ್ದೆಗಳಿದ್ದರೆ ಎರಡು ಹುದ್ದೆಗಳು ಪ್ರಾಥಮಿಕ ಶಾಲಾ ಶಿಕ್ಷಕರಿಗೆ, ಒಂದು ಹುದ್ದೆ ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಮೀಸಲಿರುತ್ತದೆ. ಪದೋನ್ನತಿಗೆ ಪರಿಗಣಿಸಲು ಎರಡು ವೃಂದದ ಶಿಕ್ಷಕರು ಕನಿಷ್ಠ 12 ವರ್ಷಗಳ ಸೇವಾ ಅವಧಿ ಪೂರ್ಣಗೊಳಿಸಿರಬೇಕು. ನಿಯಮದಂತೆ ಒಂದರಿಂದ ಐದನೇ ತರಗತಿಗೆ ಪಾಠ ಮಾಡುವ ಶಿಕ್ಷಕರು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು. ಆರು ಮತ್ತು ಏಳನೇ ತರಗತಿಗಳಿಗೆ ಪಾಠ ಮಾಡಲು ಸಂಬಂಧಿಸಿದ ವಿಷಯದಲ್ಲಿ ಪದವಿ ಪಡೆದಿರುವುದು ಕಡ್ಡಾಯವಾಗಿದೆ.

ಒಂದು ವೃಂದದಲ್ಲಿ ಅರ್ಹ ಶಿಕ್ಷಕರು ಲಭ್ಯವಿಲ್ಲದಿದ್ದಲ್ಲಿ ನಿಯಮಾನುಸಾರ ಇತರ ವೃಂದದ ಅರ್ಹ ಶಿಕ್ಷಕರನ್ನು ಜೇಷ್ಠತಾ ಪಟ್ಟಿಯ ಆಧಾರದಲ್ಲಿ ಪದೋನ್ನತಿಗೆ ಪರಿಗಣಿಸಬಹುದು. ಪ್ರೌಢಶಾಲಾ ಶಿಕ್ಷಕರನ್ನು ಗ್ರೇಡ್ 2 ವೃಂದ ಹುದ್ದೆಗೆ ಬಡ್ತಿಗೆ ಪರಿಗಣಿಸಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular