ಬೆಂಗಳೂರು: ಹದಿನೈದು ಸಾವಿರ ಶಿಕ್ಷಕರ ನೇಮಕಾತಿ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಜಿಲ್ಲಾವಾರು ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗಿದೆ.
2026ರ ಜನವರಿ 1ರಂದು ಹೊರಡಿಸಿದ್ದ ಅಧಿಸೂಚನೆಯಂತೆ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯಲ್ಲಿ ಐದು ವರ್ಷಗಳ ಸಡಿಲಿಕೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ವಯೋಮಿತಿ ಅರ್ಹತೆಯಲ್ಲಿ ಸಾಮಾನ್ಯ ವರ್ಗದವರಿಗೆ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷ ಹಾಗೂ ಎಸ್ಸಿ, ಎಸ್ಟಿ ಪ್ರವರ್ಗ 1 ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿತ್ತು.
ಈಗ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ https://schooleducation.karnataka.gov.in/cacell ವೆಬ್ಸೈಟ್ ಗಮನಿಸಬಹುದಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 15 ಸಾವಿರ ಶಿಕ್ಷಕರ ನೇಮಕಕ್ಕೆ ಜಿಲ್ಲಾವಾರು ಪ್ರತ್ಯೇಕ ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರವು ದಿನಾಂಕ 29-01-2026 ರಂದು ಆದೇಶ ಹೊರಡಿಸಿರುವಂತೆಯೇ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯಲ್ಲಿ ಐದು ವರ್ಷಗಳ ಸಡಿಲಿಕೆ ನೀಡಲಾಗಿದೆ. ವಯೋಮಿತಿಯ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದ್ದು, ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡೇ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ಲಿಂಕ್ : https://schooleducation.karnataka.gov.in/cacell.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸರ್ಕಾರಿ ಶಾಲಾ ಶಿಕ್ಷಕರ ನೇಮಕಕ್ಕೆ ಶೈಕ್ಷಣಿಕ ಜಿಲ್ಲಾವಾರು ಅಧಿಸೂಚನೆ ಹೊರಡಿಸಿದ್ದು, 1 ರಿಂದ 8 ನೇ ತರಗತಿ ತನಕ ಬೋಧಿಸುವ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಅರ್ಹತಾ ಪ್ರಮಾಣಪತ್ರವನ್ನು ಹೊಂದಿರುವುದು ಕಡ್ಡಾಯ ಎಂದು ಸ್ಪಷ್ಟಪಡಿಸಲಾಗಿದೆ. ಪ್ರೌಢ ಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು (ಗೇಡ್-1 ಮತ್ತು ಗ್ರೇಡ್-2) ಶಿಕ್ಷಕರ ಅರ್ಹತಾ ಪರೀಕ್ಷೆಯ ಅರ್ಹತಾ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯವೇನಲ್ಲ ಎಂದು ತಿಳಿಸಲಾಗಿದೆ.

