SHOCKING NEWS: ಎರಡು ಜಡೆ ಹಾಕಿಲ್ಲ ಎಂದು ವಿದ್ಯಾರ್ಥಿನಿಯರ ಜಡೆ ಕತ್ತರಿಸಿ ವಿಕೃತಿ ಮೆರೆದ ಶಿಕ್ಷಕರು

ರಾಮನಗರ: ಎರಡು ಜಡೆ ಹಾಕಿಕೊಂಡು ಬಂದಿಲ್ಲ ಎಂಬ ಕಾರಣಕ್ಕೆ ಇಬ್ಬರು ಶಿಕ್ಷಕರು ವಿದ್ಯಾರ್ಥಿನಿಯರ ಜಡೆ ಕತ್ತರಿಸಿ ವಿಕೃತಿ ಮೆರೆದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.

ಅರಳಾಳುಸಂದ್ರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ದೈಹಿಕ ಶಿಕ್ಷಕ ಹಾಗೂ ಸಹ ಶಿಕ್ಷಕಿಯ ಹುಚ್ಚಾಟಕ್ಕೆ ವಿದ್ಯಾರ್ಥಿನಿಯರು ಕಂಗಾಲಾಗಿದ್ದಾರೆ. 8ನೇ ತರಗತಿಯ ಮೂವರು ವಿದ್ಯಾರ್ಥಿನಿಯರು ಶಾಲೆಗೆ ಬರುವಾಗ ಎರಡು ಜಡೆ ಹಾಕಿಲ್ಲ ಎಂಬ ಕಾರಣಕ್ಕೆ ಮೂವರು ವಿದ್ಯಾರ್ಥಿನಿಯರ ಕೂದಲನ್ನೇ ಶಿಕ್ಷಕರು ಕತ್ತರಿಸಿದ್ದಾರೆ.

ದೈಹಿಕ ಶಿಕ್ಷಕ ಶಿವಕುಮಾರ್ ಹಾಗೂ ಸಹ ಶಿಕ್ಷಕಿ ಪವಿತ್ರ ಎಂಬುವವರು ಈ ಅಮಾನುಷ ಕೃತ್ಯವೆಸಗಿದ್ದಾರೆ. ಶಿಕ್ಷಕರ ಕೃತ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಗೆ ಆಗಮಿಸಿ ಪ್ರಾಂಶುಪಾಲರಿಗೆ ದೂರು ನೀಡಿದ್ದಾರೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಘಟನಾ ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read