HomeLatest Newsವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್: ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶೀಘ್ರ

ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್: ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶೀಘ್ರ

ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಕರ ವರ್ಗಾವಣೆಗೆ ಶೀಘ್ರದಲ್ಲೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

ಆಡಳಿತಾತ್ಮಕ ಮತ್ತು ತಾಂತ್ರಿಕ ಕಾರಣಗಳಿಂದ ಶಿಕ್ಷಕರ ವೇಳಾಪಟ್ಟಿಯನ್ನು ಪರಿಷ್ಕರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು.

ಶಿಕ್ಷಕರ ವೇಳಾಪಟ್ಟಿಯನ್ನು ಜೂನ್ ನಲ್ಲಿಯೇ ಬಿಡುಗಡೆ ಮಾಡಲಾಗಿತ್ತು. ಅದರಂತೆ ಶಿಕ್ಷಕರು ವರ್ಗಾವಣೆಗೆ ಅರ್ಜಿ ಸಲ್ಲಿಸುವುದು, ಹೆಚ್ಚುವರಿ ಶಿಕ್ಷಕರನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿತ್ತು, ಆದರೆ ಕೆಲವು ಆಡಳಿತಾತ್ಮಕ ಮತ್ತು ತಾಂತ್ರಿಕ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಜೂನ್ ನಲ್ಲಿ ಹೊರಡಿಸಿದ್ದ ವೇಳಾಪಟ್ಟಿಗೆ ತಡೆ ನೀಡಿದೆ. ಪರಿಷ್ಕೃತ ವೇಳಾಪಟ್ಟಿ ಸಿದ್ಧಪಡಿಸಿ ಶೀಘ್ರದಲ್ಲೇ ಬಿಡುಗಡೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular