HomeLatest Newsಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಿಹಿ ಸುದ್ದಿ: ಶಾಲೆ, ಕಾಲೇಜುಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಿದರೆ ವಿದೇಶ...

ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಿಹಿ ಸುದ್ದಿ: ಶಾಲೆ, ಕಾಲೇಜುಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಿದರೆ ವಿದೇಶ ಪ್ರವಾಸ ಆಫರ್…!

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿದರೆ ವಿದೇಶ ಪ್ರವಾಸ ಭಾಗ್ಯ ಸಿಗಲಿದೆ.

ದಾಖಲಾತಿ ಗುರಿ ಪೂರೈಸುವ ಡಿಡಿಪಿಐ, ಬಿಇಒ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ವಿದೇಶಿ ಪ್ರವಾಸದ ಆಫರ್ ನೀಡಿದೆ. ಮುಂದಿನ ಶೈಕ್ಷಣಿಕ ವರ್ಷ 2026 -27ನೇ ಸಾಲಿಗೆ ದಾಖಲಾತಿ ಜಾಗೃತಿ ಅಭಿಯಾನ ನಡೆಸುವ ಸರ್ಕಾರಿ ಶಾಲೆಗಳು, ಪಿಯು ಕಾಲೇಜುಗಳಲ್ಲಿ ಅರ್ಹ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ನವೆಂಬರ್ 14ರಂದು ನಡೆದ ಮಕ್ಕಳ ದಿನಾಚರಣೆಯಲ್ಲಿ 6ರಿಂದ 18 ವರ್ಷದ ಮಕ್ಕಳ ದಾಖಲಾತಿ ಜಾಗೃತಿ ಅಭಿಯಾನ ನಡೆಸಲಾಗಿದೆ. ನಿಗದಿತ ಗುರಿಗಿಂತ ಹೆಚ್ಚಿನ ಸಾಧನೆ ಮಾಡುವ ತಲಾ ಐವರು ಡಿಡಿಪಿಐ, ಬಿಇಒ, ಪ್ರಾಥಮಿಕ ಮತ್ತು ಪ್ರೌಢಶಾಲೆ ಮುಖ್ಯ ಶಿಕ್ಷಕರು, ಪಿಯು ಕಾಲೇಜಿನ ಪ್ರಾಂಶುಪಾಲರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿನ ಅತ್ಯುತ್ತಮ ಆಚರಣೆಗಳ ಬಗ್ಗೆ ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಸಾಲಿನ ದಾಖಲಾತಿಗಿಂತ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಶೇಕಡ 15ರಷ್ಟು ಹೆಚ್ಚಳವಾಗಬೇಕು. ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಪಿಎಂ ಶ್ರೀ ಶಾಲೆಗಳಲ್ಲಿ ಕನಿಷ್ಠ ಶೇಕಡ 25ರಷ್ಟು ದಾಖಲಾತಿ ಹೆಚ್ಚಿಸಬೇಕು ಎಂದು ಗುರಿ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular