BREAKING : ‘ಏಷ್ಯಾಕಪ್ ಟೂರ್ನಿ’ಗೆ ‘ಟೀಮ್ ಇಂಡಿಯಾ’ ಪ್ರಕಟ, ‘ಸೂರ್ಯಕುಮಾರ್ ಯಾದವ್’ ನಾಯಕ |Asia Cup 2025

ಸೆಪ್ಟೆಂಬರ್ 9 ರಿಂದ ಆರಂಭವಾಗುವ ಏಷ್ಯಾಕಪ್ ಟೂರ್ನಿಗೆ ಟೀಮ್ ಇಂಡಿಯಾ ಆಟಗಾರರ ಹೆಸರು ಪ್ರಕಟವಾಗಿದೆ. ಸೂರ್ಯಕುಮಾರ್ ಯಾದವ್’ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ, ಭಾರತದ ಟೆಸ್ಟ್ ತಂಡದ ನಾಯಕ ಶುಭ್ಮನ್ ಗಿಲ್ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ,ಜಸ್ಪ್ರೀತ್ ಬುಮ್ರಾ ಅವರನ್ನು ಎಸಿಸಿ ಪುರುಷರ ಏಷ್ಯಾ ಕಪ್ ಟಿ20 ಗಾಗಿ ಸೂರ್ಯಕುಮಾರ್ ಯಾದವ್ ನೇತೃತ್ವದ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ತಂಡವನ್ನು ಅಧಿಕೃತವಾಗಿ ಆಗಸ್ಟ್ 19 ರಂದು ಮಂಗಳವಾರ ಘೋಷಿಸಲಾಯಿತು, ಅಜಿತ್ ಅಗರ್ಕರ್ ಅವರು ಮುಂಬೈನ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಕೂಲಂಕಷ ಚರ್ಚೆಗಳ ನಂತರ ತಂಡವನ್ನು ಅನಾವರಣಗೊಳಿಸಿದರು.

ಏಷ್ಯಾಕಪ್ ಸೆಪ್ಟೆಂಬರ್ 9 ರಿಂದ 28 ರವರೆಗೆ ಯುಎಇಯಲ್ಲಿ ನಡೆಯಲಿದ್ದು, ಭಾರತ ಸೆಪ್ಟೆಂಬರ್ 10 ರಂದು ಆತಿಥೇಯರ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿದೆ. ಸೆಪ್ಟೆಂಬರ್ 14 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ನಿಗದಿಪಡಿಸಲಾಗಿದ್ದು, ಎರಡೂ ಪಂದ್ಯಗಳು ದುಬೈನಲ್ಲಿ ನಡೆಯಲಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read