HomeLatest Newsವಿಂಡೀಸ್ ಮಣಿಸಿ ಭಾರತಕ್ಕೆ ಬಿಗ್ ರಿಲೀಫ್ ಕೊಟ್ಟ ಆಫ್ರಿಕಾ, ಸೆಮಿಫೈನಲ್ ಸಮಸ್ಯೆ ಪರಿಹಾರ; ಮಾರ್ಕ್ರಮ್ ಫೋಟೊಗೆ...

ವಿಂಡೀಸ್ ಮಣಿಸಿ ಭಾರತಕ್ಕೆ ಬಿಗ್ ರಿಲೀಫ್ ಕೊಟ್ಟ ಆಫ್ರಿಕಾ, ಸೆಮಿಫೈನಲ್ ಸಮಸ್ಯೆ ಪರಿಹಾರ; ಮಾರ್ಕ್ರಮ್ ಫೋಟೊಗೆ ಭಾರತೀಯರ ಪೂಜೆ

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್‌ 8 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾ 9 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಂಡಿತು.

ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆರಿಸಿಕೊಂಡು ವೆಸ್ಟ್ ಇಂಡೀಸ್ ತಂಡವನ್ನು ಮೊದಲು ಬ್ಯಾಟಿಂಗ್ ಆಹ್ವಾನಿಸಿತು. ಅದರಂತೆ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 176 ರನ್ ಬಾರಿಸಿ ದಕ್ಷಿಣ ಆಫ್ರಿಕಾಗೆ 177 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 16.1 ಓವರ್‌ಗಳಲ್ಲಿ ಕೇವಲ 1 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿತು.

ಹೀಗೆ ದಕ್ಷಿಣ ಆಫ್ರಿಕಾ ವೆಸ್ಟ್ ಇಂಡೀಸ್ ತಂಡವನ್ನು ಮಣಿಸುತ್ತಿದ್ದಂತೆ ಭಾರತ ತಂಡಕ್ಕೆ ತಲೆನೋವಾಗಿದ್ದ ಸೆಮಿಫೈನಲ್ ಲೆಕ್ಕಾಚಾರ ನಿವಾರಣೆಯಾಗಿದೆ. ಒಂದುವೇಳೆ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಜಯ ಸಾಧಿಸಿದ್ದರೆ ಭಾರತ ಜಿಂಬಾಬ್ವೆ ವಿರುದ್ಧ ದೊಡ್ಡ ಗೆಲುವು ಸಾಧಿಸಬೇಕಿತ್ತು. ಆದರೀಗ ಕೇವಲ ಗೆಲುವು ಮಾತ್ರ ಅಗತ್ಯವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೌದು, ಭಾರತ ಇಂದೇ ನಡೆಯುತ್ತಿರುವ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಗೆದ್ದು ಬಳಿಕ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಪಂದ್ಯವನ್ನು ಗೆದ್ದರೆ ನೇರವಾಗಿ ಸೆಮಿಫೈನಲ್‌ಗೆ ಲಗ್ಗೆ ಇಡಲಿದೆ.

ಹೀಗೆ ವಿಂಡೀಸ್ ಮಣಿಸಿ ಭಾರತಕ್ಕೆ ಭರ್ಜರಿ ಗಿಫ್ಟ್ ಕೊಟ್ಟ ದಕ್ಷಿಣ ಆಫ್ರಿಕಾಗೆ ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕೃತಜ್ಞತೆ ಸಲ್ಲಿಸಿ, ಕೊಂಡಾಡಿದ್ದಾರೆ. ಇನ್ನು ಈ ಪಂದ್ಯವನ್ನು ಗೆಲ್ಲಲಿ ಎಂದು ಭಾರತ ಕ್ರಿಕೆಟ್ ತಂಡದ ಅಭಿಮಾನಿಯೊಬ್ಬ ದಕ್ಷಿಣ ಆಫ್ರಿಕಾ ಆಟಗಾರರಿಗೆ ಪೂಜೆ ಸಲ್ಲಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular