ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತವನ್ನು ತಂಡ ಮೊದಲ ವಿಶ್ವಕಪ್ ಜಯಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತೀಯ ಮಹಿಳಾ ಕ್ರಿಕೆಟ್ ತಂಡ ಅದ್ಭುತ ಆಟದ ಮೂಲಕ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ವಿಶ್ವವಿಜೇತ ಭಾರತೀಯ ಕ್ರಿಕೆಟ್ ಆಟಗಾರ್ತಿಯರಿಗೆ ಅಭಿನಂದನೆಗಳು. ಇಡೀ ಪಂದ್ಯಾವಳಿಯುದ್ದಕ್ಕೂ ಅತ್ಯಂತ ಸಂಘಟಿತ ಪ್ರದರ್ಶನ ನೀಡುತ್ತಾ ಬಂದಿದ್ದ ಭಾರತೀಯ ಆಟಗಾರ್ತಿಯರು ನಿಜಕ್ಕೂ ಈ ಪ್ರಶಸ್ತಿಗೆ ಅರ್ಹರು. ಕ್ರಿಕೆಟ್ ಪ್ರೇಮಿಯಾದ ನನಗಿದು ಹೆಚ್ಚು ಖುಷಿ ಕೊಟ್ಟಿದೆ. ಇತಿಹಾಸ ಸೃಷ್ಟಿಯಾದ ಈ ದಿನ ಬಹುಕಾಲ ನೆನಪಿನಲ್ಲಿ ಉಳಿಯುವಂತಹುದ್ದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ವಿಶ್ವ ಚಾಂಪಿಯನ್ಸ್! 2025 ರ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ನಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಮ್ ಇಂಡಿಯಾಕ್ಕೆ ಅಭಿನಂದನೆಗಳು. ನಿಮ್ಮ ಗೆಲುವು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ ಮತ್ತು ಕನಸು ಕಾಣುವ ಪ್ರತಿಯೊಬ್ಬ ಯುವತಿಯರಿಗೂ ಸ್ಫೂರ್ತಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿನಂದಿಸಿದ್ದಾರೆ.
ಭಾರತೀಯ ಮಹಿಳಾ ಕ್ರಿಕೆಟ್ ತಂಡ ಅದ್ಭುತ ಆಟದ ಮೂಲಕ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ವಿಶ್ವವಿಜೇತ ಭಾರತೀಯ ಕ್ರಿಕೆಟ್ ಆಟಗಾರ್ತಿಯರಿಗೆ ಅಭಿನಂದನೆಗಳು.
— Siddaramaiah (@siddaramaiah) November 2, 2025
ಇಡೀ ಪಂದ್ಯಾವಳಿಯುದ್ದಕ್ಕೂ ಅತ್ಯಂತ ಸಂಘಟಿತ ಪ್ರದರ್ಶನ ನೀಡುತ್ತಾ ಬಂದಿದ್ದ ಭಾರತೀಯ ಆಟಗಾರ್ತಿಯರು ನಿಜಕ್ಕೂ ಈ ಪ್ರಶಸ್ತಿಗೆ ಅರ್ಹರು. ಕ್ರಿಕೆಟ್ ಪ್ರೇಮಿಯಾದ ನನಗಿದು… pic.twitter.com/vDw7M3wmOt
Champions of the World!🏆🇮🇳
— DK Shivakumar (@DKShivakumar) November 2, 2025
Congratulations to Team India on a phenomenal victory in the ICC Women's Cricket World Cup 2025.
Your triumph is a proud moment for the nation and an inspiration for every young girl with a dream.#CWC25 #ICCWomensWorldCup2025 pic.twitter.com/2cajsvQTzV
