HomeLatest NewsBREAKING : ನಟ 'ರಣವೀರ್ ಸಿಂಗ್' ನಟನೆಯ 'ಧುರಂಧರ್'-2 ಚಿತ್ರದ ಟೀಸರ್ ರಿಲೀಸ್ |WATCH TEASER

BREAKING : ನಟ ‘ರಣವೀರ್ ಸಿಂಗ್’ ನಟನೆಯ ‘ಧುರಂಧರ್’-2 ಚಿತ್ರದ ಟೀಸರ್ ರಿಲೀಸ್ |WATCH TEASER

ಬಾಲಿವುಡ್ ನಟ ರಣವೀರ್ ಸಿಂಗ್ ನಟನೆಯ ಸೂಪರ್ ಹಿಟ್ ಚಿತ್ರ ‘ಧುರಂಧರ್’ನ ಎರಡನೇ ಭಾಗದ ಟೀಸರ್ ಇಂದು ಬಿಡುಗಡೆಯಾಗಿದ್ದು, ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ.

ಹೌದು, ಇಂದು ಬಹು ನಿರೀಕ್ಷಿತ ‘ಧುರಂಧರ್ 2’ (Dhurandhar 2) ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ರಣವೀರ್ ಸಿಂಗ್ ಅವರ ಖಡಕ್ ಲುಕ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಈ ಚಿತ್ರವು ಮಾರ್ಚ್ 19, 2026 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ.

‘ಟಾಕ್ಸಿಕ್’ ಜೊತೆ ಪೈಪೋಟಿ : ಕುತೂಹಲಕಾರಿ ವಿಷಯವೆಂದರೆ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗುತ್ತಿರುವ ಸಮಯದಲ್ಲೇ ರಣವೀರ್ ಚಿತ್ರವೂ ತೆರೆಗೆ ಬರುತ್ತಿದೆ. ಇದರಿಂದ ಬಾಕ್ಸ್ ಆಫೀಸ್ನಲ್ಲಿ ಭಾರೀ ಪೈಪೋಟಿ ಏರ್ಪಡುವುದು ಖಚಿತವಾಗಿದೆ.ಈ ಚಿತ್ರವು ಹಿಂದಿ ಸೇರಿದಂತೆ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಸಂಜಯ್ ದತ್, ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್ ಮತ್ತು ಆರ್. ಮಾಧವನ್ ಅವರಂತಹ ದಿಗ್ಗಜ ನಟರು ನಟಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದಿನ ದಾಖಲೆ
2025ರ ಡಿಸೆಂಬರ್ನಲ್ಲಿ ಬಿಡುಗಡೆಯಾಗಿದ್ದ ‘ಧುರಂಧರ್’ ಮೊದಲ ಭಾಗವು ವಿಶ್ವಾದ್ಯಂತ ಸುಮಾರು 1,347 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್ಬಸ್ಟರ್ ಎನಿಸಿಕೊಂಡಿತ್ತು. ಇದೀಗ ಕೇವಲ ಐದು ತಿಂಗಳ ಅಂತರದಲ್ಲಿ ಸೀಕ್ವೆಲ್ ಬಿಡುಗಡೆಯಾಗುತ್ತಿರುವುದು ವಿಶೇಷವಾಗಿದೆ. ಈ ಚಿತ್ರವು ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲೂ ತೆರೆಕಾಣುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಅವರ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗುವ ಸಂದರ್ಭದಲ್ಲೇ ಇದು ಕೂಡ ಬರುತ್ತಿರುವುದು ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular