HomeEntertainment'ದೇಸಾಯಿ' ಚಿತ್ರದ ಟೀಸರ್ ರಿಲೀಸ್

‘ದೇಸಾಯಿ’ ಚಿತ್ರದ ಟೀಸರ್ ರಿಲೀಸ್

ಪ್ರವೀಣ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ದೇಸಾಯಿ’ ಚಿತ್ರದ ಟೀಸರ್  ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಶ್ರೀ ಜಯಬಸವ ಕುಮಾರ ಸ್ವಾಮಿಗಳು ಮತ್ತು ಲಕ್ಷ್ಮಣ ಸವದಿ ಈ ಟೀಸರ್ ಲಾಂಚ್ ಮಾಡುವ ಮೂಲಕ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.

ನಾಗಿ ರೆಡ್ಡಿ ಭಡ ನಿರ್ದೇಶನದ ಈ ಚಿತ್ರದಲ್ಲಿ ಪ್ರವೀಣ್ ಕುಮಾರ್ ಮತ್ತು ರಾಧ್ಯ ಮುಖ್ಯ ಭೂಮಿಕೆಯಲ್ಲಿದ್ದು, ಒರಟ ಪ್ರಶಾಂತ್, ಚೆಲುವರಾಜು, ಮಧುಸೂದನ್ ರಾವ್, ಮಂಜುನಾಥ್ ಹೆಗಡೆ, ಸೃಷ್ಟಿ, ಹರಿಣಿ,ಕಲ್ಯಾಣಿ, ಉಳಿದ ಪಾತ್ರ ವರ್ಗದಲ್ಲಿದ್ದಾರೆ. ವೀರಭದ್ರೇಶ್ವರ ಕ್ರಿಯೇಟಿವ್ ಫಿಲ್ಮ್ಸ್ ಬ್ಯಾನರ್ ನಲ್ಲಿ ಮಹಾಂತೇಶ್ ವಿ ಚೋಳಚ ಗುಡ್ಡ ನಿರ್ಮಾಣ ಮಾಡಿದ್ದಾರೆ. ದೀಪು ಎಸ್ ಕುಮಾರ್ ಸಂಕಲನ, ಪಿಕೆ ಎಚ್ ದಾಸ್ ಛಾಯಾಗ್ರಹಣವಿದೆ. ಸಾಯಿ ಕಾರ್ತಿಕ್ ಸಂಗೀತ ಸಂಯೋಜನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular