HomeKarnatakaಸಚಿವ ಮಧು ಬಂಗಾರಪ್ಪ ಸಭೆ ವಿಫಲ: ಆ. 12 ರಂದು ಶಿಕ್ಷಕರ ಪ್ರತಿಭಟನೆ

ಸಚಿವ ಮಧು ಬಂಗಾರಪ್ಪ ಸಭೆ ವಿಫಲ: ಆ. 12 ರಂದು ಶಿಕ್ಷಕರ ಪ್ರತಿಭಟನೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 12 ರಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರತಿಭಟನೆಗೆ ಕರೆ ನೀಡಿದೆ.

ಸಂಘಟನೆಯ ಪ್ರತಿನಿಧಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ನಡೆಸಿದ ಮನವೊಲಿಕೆ ಸಭೆ ವಿಫಲವಾಗಿದ್ದು, ಪ್ರತಿಭಟನೆ ನಡೆಯುವುದು ಬಹುತೇಕ ಖಚಿತವಾಗಿದೆ. ಪದವಿ ಪೂರ್ಣಗೊಳಿಸಿದ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಬಡ್ತಿ ನೀಡಬೇಕು. 2017ರ ಹೊಸ ವೃಂದ ನೇಮಕಾತಿಗಳನ್ನು 2016ರ ಮೊದಲು ನೇಮಕವಾದವರಿಗೆ ಪೂರ್ವಾನ್ವಯಗೊಳಿಸಬಾರದು. ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಸಚಿವ ಮಧು ಬಂಗಾರಪ್ಪ ಅವರು ಸಮಗ್ರ ಶಿಕ್ಷಣ ಕರ್ನಾಟಕ ಸಭಾಂಗಣದಲ್ಲಿ ಸಂಘಟನೆಯ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಶಿಕ್ಷಕರ ಬೇಡಿಕೆ ಆಲಿಸಿದ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕರ ಬೇಡಿಕೆ ಈಡೇರಿಸಲು ಇಲಾಖೆ ಬದ್ಧವಾಗಿದ್ದು, ಈ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿ ಮುಖ್ಯಮಂತ್ರಿಗಳ ಒಪ್ಪಿಗೆ ಪಡೆಯಬೇಕು. ಪಟ್ಟು ಹಿಡಿಯದೆ ಪ್ರತಿಭಟನೆ ಕೈ ಬಿಡಿ ಎಂದು ಮನವಿ ಮಾಡಿದ್ದು, ಇದಕ್ಕೆ ಒಪ್ಪದ ಶಿಕ್ಷಕರ ಸಂಘದ ಪ್ರತಿನಿಧಿಗಳು ಸಭೆಯಿಂದ ಹೊರ ನಡೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular