HomeLive NewsBREAKING : ಬೆಂಗಳೂರಲ್ಲಿ ರಸ್ತೆ ಗುಂಡಿಗೆ ಮಹಿಳಾ ಟೆಕ್ಕಿ ಬಲಿ : ಬೈಕ್' ನಿಂದ ಕೆಳಗೆ...

BREAKING : ಬೆಂಗಳೂರಲ್ಲಿ ರಸ್ತೆ ಗುಂಡಿಗೆ ಮಹಿಳಾ ಟೆಕ್ಕಿ ಬಲಿ : ಬೈಕ್’ ನಿಂದ ಕೆಳಗೆ ಬಿದ್ದಾಗ ಲಾರಿ ಹರಿದು ಸ್ಥಳದಲ್ಲೇ ಸಾವು.!

ಬೆಂಗಳೂರು :   ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಮಹಿಳಾ ಟೆಕ್ಕಿ ಟೆಕ್ಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೈಕ್ ನಲ್ಲಿ ಹೋಗುತ್ತಿದ್ದಾಗ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದು ಟೆಕ್ಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಮಾದನಾಯನಳ್ಳಿಯ ಹುಸ್ಕೂರು ಎಪಿಎಂಸಿ ಬಳಿ ಈ ಘಟನೆ ನಡೆದಿದೆ.

ಬೈಕ್ ನಿಂದ ಬಿದ್ದು 26 ವರ್ಷದ ಪ್ರಿಯಾಂಕಾ ಮೃತಪಟ್ಟಿದ್ದಾರೆ. ಮಾದನಾಯನಳ್ಳಿಯ ಹುಸ್ಕೂರು ಎಪಿಎಂಸಿ ಬಳಿ ಈ ಘಟನೆ ನಡೆದಿದೆ. ಸಹೋದರನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. . ರಸ್ತೆಗೆ ಬಿದ್ದಿದ್ದ ಪ್ರಿಯಾಂಕಾ ತಲೆ ಮೇಲೆ ಲಾರಿ ಹರಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಬೈಕ್ ನಲ್ಲಿ ಹುಸ್ಕೂರಿನಿಂದ ಮಾದಾವರಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular