ಬಿಲಾಸ್ ಪುರ: ಸ್ನೇಹಿತೆಯೇ ತನ್ನ ಮೇಲೆ ಅತ್ಯಾಚಾರ ಆರೋಪ ಮಾಡಿದ್ದಕ್ಕೆ ಮನನೊಂದ ಟೆಕ್ಕಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ.
29 ವರ್ಷದ ಇಂಜಿನಿಯರ್ ಗೌರವ್ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗೌರವ್ ನೊಯ್ಡಾದಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಮ್ಯಾಟ್ರಿಮೋನಿ ವೆಬ್ ಸೈಟ್ ನಲ್ಲಿ ಯುವತಿಯೊಬ್ಬಳು ಪರಿಚಯವಾಗಿದ್ದಳು. ಇಬ್ಬರು ಸ್ನೇಹಿತರಾಗಿದ್ದರು. ಆದರೆ ಯುವತಿ ಏಕಾಏಕಿ ಗೌರವ್ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದಳು.
ಪ್ರಕರಣದಲ್ಲಿ ಗೌರವ್ ನನ್ನು ಬಂಧಿಸಲಾಗಿತ್ತು. ಜೈಲು ಸೇರಿದ್ದ ಗೌರವ್ 15 ದಿನಗಳ ಹಿಂದಷ್ಟೇ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಸುಳ್ಳು ಆರೋಪಮಾಡಿ ಜೈಲಿಗೆ ಕಳುಹಿಸಿದ್ದ ಗೆಳತಿಯಿಂದ ತೀವ್ರವಾಗಿ ಮನನೊಂಡು ಖಿನ್ನತೆಗೆ ಒಳಗಾಗಿದ್ದರು. ಇದೇ ನೋವಿನಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.