ಬೆಂಗಳೂರು : ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಟೇಕಫ್ ಆಗಲೇ ಇಲ್ಲ.
ಹೌದು. ಹೆಚ್ ಎ ಎಲ್ ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಸಿಎಂ ಸಿದ್ದರಾಮಯ್ಯ ತುಮಕೂರಿಗೆ ತೆರಳಬೇಕಿತ್ತು. ಆದರೆ ಹೆಲಿಕಾಪ್ಟರ್ ಟೇಕಫ್ ಆಗದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ರಸ್ತೆ ಮಾರ್ಗವಾಗಿ ತುಮಕೂರಿಗೆ ತೆರಳಿದ್ದಾರೆ. ತುಮಕೂರಿನಲ್ಲಿ ನಡೆಯಲಿರುವ ಕರ್ನಾಟಕ ಕ್ರೀಡಾಂಗಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ
.ತುಮಕೂರಿಗೆ ಆಗಮಿಸುವ ಸಿಎಂ ಸಿದ್ದರಾಮಯ್ಯ ರಾಜಣ್ಣ ಅವರ ಮನೆಯಲ್ಲಿ ನಡೆಯಲಿರುವ ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ. ನಂತರ ಅವರ ಜೊತೆ ರಾಜಕೀಯ ಚರ್ಚೆ ನಡೆಸಲಿದ್ದಾರೆ. ನಂತರ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

