ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಿವಶ್ರೀ ಸ್ಕಂದಪ್ರಸಾದ್ ಅವರ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದ್ದು, ಗಣ್ಯರು ಶುಭ ಹಾರೈಸಿದ್ದಾರೆ.
ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶೀರ್ವದಿಸಿದ್ದಾರೆ. ಕೇಂದ್ರ ಸಚಿವ ರಾಜನಾಥ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ರಾಮಮೋಹನ್ ನಾಯ್ಡು, ಅನುರಾಗ್ ಠಾಕೂರ್, ವಿಪಕ್ಷ ನಾಯಕರು ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವ ಭೈರತಿ ಬಸವರಾಜು, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಸುನಿಲ್ ಕುಮಾರ್, ನಟ ರಮೇಶ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರು ಶುಭ ಹಾರೈಸಿದ್ದಾರೆ. ವಿವಿಧ ಕ್ಷೇತ್ರಗಳ ಗಣ್ಯರು, ಅಭಿಮಾನಿಗಳು, ಕಾರ್ಯಕರ್ತರು ತೇಜಸ್ವಿ ಸೂರ್ಯ ದಂಪತಿಗೆ ಶುಭ ಹಾರೈಸಿದ್ದಾರೆ.