HomeLatest Newsತೇಜಸ್ವಿ ಸೂರ್ಯ ಪತ್ನಿ, ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಗೆ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ

ತೇಜಸ್ವಿ ಸೂರ್ಯ ಪತ್ನಿ, ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಗೆ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನು ಸಂಗೀತ ನಾಟಕ ಅಕಾಡೆಮಿಯ 2025 ನೇ ಸಾಲಿನ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

2024 ಮತ್ತು 25ನೇ ಸಾಲಿಗೆ ಒಟ್ಟು 106 ಕಲಾವಿದರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಸಂಗೀತ ನೃತ್ಯ ಸೇರಿದಂತೆ ವಿವಿಧ ಕಲೆಯಲ್ಲಿ ಸೇವೆ ಸಲ್ಲಿಸುವ ಯುವ ಕಲಾವಿದರಿಗೆ ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಸ್ಮರಣಾರ್ಥ ಯುವ ಪುರಸ್ಕಾರ ಪ್ರಶಸ್ತಿ ನೀಡಲಾಗುವುದು.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಶಿವಶ್ರೀ ಕಂದ ಪ್ರಸಾದ್, ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರಕ್ಕೆ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ದೇವರಿಗೆ ಗುರುಗಳಿಗೆ ಗೌರವ ಸಮರ್ಪಿಸುತ್ತೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಖ್ಯಾತ ಕರ್ನಾಟಕ ಶಾಸ್ತ್ರೀಯ ಸಂಗೀತಗಾರ್ತಿ ಮತ್ತು ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ (Sivasri Skandaprasad) ಅವರು ಪ್ರತಿಷ್ಠಿತ ಸಂಗೀತ ನಾಟಕ ಅಕಾಡೆಮಿಯ ‘ಯುವ ಪುರಸ್ಕಾರ’ (Yuva Puraskar) ಗೌರವಕ್ಕೆ ಭಾಜನರಾಗಿದ್ದಾರೆ。

ಭಾರತೀಯ ಶಾಸ್ತ್ರೀಯ ಸಂಗೀತ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಘೋಷಿಸಿದೆ. ಶಿವಶ್ರೀ ಅವರು ಸಂಗೀತ ಮತ್ತು ನಾಮಸಂಕೀರ್ತನೆ ಸಂಪ್ರದಾಯದ ಕುಟುಂಬದಿಂದ ಬಂದವರು. ಶಿವಶ್ರೀ ಅವರು ಬಾಲ್ಯದಿಂದಲೂ ಸಂಗೀತ ಹಾಗೂ ನೃತ್ಯ ಅಭ್ಯಾಸವನ್ನು ನಡೆಸುತ್ತಾ ಬಂದಿದ್ದಾರೆ. ಕರ್ನಾಟಕ ಸಂಗೀತದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದು, ತಮ್ಮ ಸಂಸ್ಥೆಯ ಮೂಲಕ ಭಾರತೀಯ ಶಾಸ್ತ್ರೀಯ ಸಂಗೀತ ಮತ್ತು ಭರತನಾಟ್ಯವನ್ನು ಕಲಿಸುತ್ತಿದ್ದಾರೆ.

ಸಂಗೀತ ನಾಟಕ ಅಕಾಡೆಮಿಯ ಯುವ ಪುರಸ್ಕಾರವು ಭಾರತೀಯ ಯುವ ಕಲಾವಿದರಿಗೆ ದೊರೆಯುವ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದೆ. ಇದರ ಜೊತೆಗೆ ಇವರು ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಸುಬ್ಬುಲಕ್ಷ್ಮಿ ಪ್ರಶಸ್ತಿ ಮತ್ತು ಫೆಲೋಶಿಪ್ ಹಾಗೂ ಸಂಗೀತ ಶಿರೋಮಣಿ ಪುರಸ್ಕಾರವನ್ನೂ ಪಡೆದುಕೊಂಡಿದ್ದಾರೆ.

https://www.facebook.com/artsivasri?cft[0]=AZbNsU9cHa8X0TwE4A3AQoI2G2Iq3AnlNpgtBbyB3tZYZnGXcOEkD4FinXBb71MCH7oDlIjCNkIGCKfZrP8rlRZ5l4PAwCtGB_gaA4cgT042YWvJXERV5SwPYve8KaeXvyJjv_PXFWiJhTwFRmSV2INPfasacNUCREnqiEmunwSTCmVUj4XYFJId9CNWelgSMUY&tn=-]C%2CP-R

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular