ಬೆಂಗಳೂರು: ತೇಜಸ್ವಿನಿ ಅನಂತಕುಮಾರ್ ಅವರ ಜತೆ ರಾಜಕೀಯ ಚರ್ಚೆ ಎಂಬ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಅವರೊಂದಿಗೆ ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ. ದಯಮಾಡಿ ನಾನು ಕ್ಷಮೆ ಕೇಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ದಿ. ಅನಂತಕುಮಾರ್ ಕಾರ್ಯಕ್ರಮದ ಬಗ್ಗೆ ನನ್ನ ಜತೆ ತೇಜಸ್ವಿನಿ ಅನಂತಕುಮಾರ್ ಅವರು ಚರ್ಚೆ ನಡೆಸಿದ್ದಾರೆ. ಆ ರೀತಿ ಟ್ವೀಟ್ ಮಾಡಿದ್ರೆ ಕ್ಷಮೆ ಇರಲಿ. ನನ್ನ ಹೆಸರಲ್ಲಿ ಅವರೊಂದಿಗೆ ರಾಜಕೀಯ ಚರ್ಚೆ ಮಾಡಿದ್ದ ಟ್ವೀಟ್ ಇದ್ದರೆ ಅದನ್ನು ಕೂಡಲೇ ತೆಗೆದು ಹಾಕುವೆ. ಟ್ವೀಟ್ ಮಾಡಿದ ಸಿಬ್ಬಂದಿ ವಜಾಗೊಳಿಸುವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿ.ಅನಂತ್ ಕುಮಾರ್ ಅವರ ಪತ್ನಿ ಶ್ರೀಮತಿ @Tej_AnanthKumar ಅವರು ಇಂದು ನನ್ನನ್ನು ಕುಮಾರ ಕೃಪಾ ಅತಿಥಿ ಗೃಹದಲ್ಲಿ ಭೇಟಿಯಾಗಿ ರಾಜ್ಯ ರಾಜಕೀಯ ವಿಚಾರಗಳ ಕುರಿತು ಚರ್ಚಿಸಿದರು. pic.twitter.com/K8jgEgLHUe
— DK Shivakumar (@DKShivakumar) September 4, 2023

