HomeKarnatakaBIG NEWS: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸಂಸದ ತೇಜಸ್ವಿ ಸೂರ್ಯ ತಿರುಗೇಟು

BIG NEWS: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸಂಸದ ತೇಜಸ್ವಿ ಸೂರ್ಯ ತಿರುಗೇಟು

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಪೂರೈಸುತ್ತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದು, ಈಗ ಅಕ್ಕಿ ನೀಡಲಾಗದೇ ಮೋದಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುವ ಅಕ್ಕಿ ಯಾವುದೂ ನಿಲ್ಲುವುದಿಲ್ಲ. ಇದು ದ್ವೇಷದ ರಾಜಕಾರಣವಲ್ಲ, ಅಸಮರ್ಥ ರಾಜಕಾರಣ ಎಂದು ತಿರುಗೇಟು ನೀಡಿದ್ದಾರೆ.

ಈ ಹಿಂದೆಯೂ ಸಿದ್ದರಾಮಯ್ಯನವರು ಅನ್ನಭಾಗ್ಯ ಯೋಜನೆ ಘೋಷಿಸಿದ್ದರು. ಆಗಲೂ ಕೇಂದ್ರ ಸರ್ಕಾರದ ಅಕ್ಕಿಗೆ ತಮ್ಮ ಫೋಟೋ ಹಾಕಿಕೊಂಡಿದ್ದರು ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular