ಹೈದರಾಬಾದ್: ತೆಲಂಗಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣದಲ್ಲಿ ಈವರೆಗೆ 40 ಜನರು ಸಾವನ್ನಪ್ಪಿದ್ದು, 33ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 40 ಜನರು ಮೃತಪಟ್ಟಿದ್ದಾರೆ. 33 ಜನರು ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಸಿಗಾಚಿ ಇಂಡಸ್ಟ್ರೀಸ್ ತಿಳಿಸಿದೆ. ಅಲ್ಲದೇ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಕಂಪನಿಯೇ ಭರಿಸಲಿದೆ ಎಂದು ಮಾಹಿತಿ ನೀಡಿದೆ.
ಸಂಗಾರೆಡ್ದಿ ಜಿಲ್ಲೆಯ ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್ ನಲ್ಲಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ೪೦ಕ್ಕೆ ಏರಿಕೆಯಾಗಿದೆ.
ಮೃತರ ಕುಟುಖ್ಬಕ್ಕೆ ಕಂಪನಿಯಿಂದ 1 ಕೋಟಿ ಪರಿಹಾರ ನೀಡಲಾಗಿದೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ತಿಳಿಸಿದ್ದರು. ಇನ್ನು ಗಂಭೀರವಾಗಿ ಗಾಯಗೊಂಡವರಿಗೆ ತಲಾ 10 ಲಕ್ಷ ಪರಿಹಾರ ಹಾಗೂ ಸಣ್ಣಪುಟ್ಟ ಗಾಯಾಳುಗಳಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದಿದ್ದರು.
ಇನ್ನು ಕಾರ್ಖಾನೆಯನ್ನು 90 ದಿನಗಳವರೆಗೆ ಮುಚ್ಚಲಾಗಿದೆ ಎಂದು ತಿಳಿದುಬಂದಿದೆ. ಈಗಾಗಲೇ ಸಿಗಾಚಿ ಕಂಪನಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.