HomeKarnatakaಬಸ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬಸ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟ ಘಟನೆ ತೆಲಂಗಾಣದ ಗಣೇಶಪುರ ಗ್ರಾಮದ ಬಳಿ ನಡೆದಿದೆ.

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದಂಪತಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಣೇಶಪುರ ಗ್ರಾಮದ ಜಗನ್ನಾಥ(35), ಪತ್ನಿ ರೇಣುಕಾ(35), ಪುತ್ರ ವಿನೋದ್ ಕುಮಾರ್(14) ಸ್ಥಳದಲ್ಲೇ ಮೃತಪಟ್ಟವರು. ಬೀದರ್ ಜಿಲ್ಲಾಸ್ಪತ್ರೆಗೆ ಮೂವರ ಮೃತದೇಹಗಳನ್ನು ಸ್ಥಳಾಂತರ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular