HomeLatest Newsಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ದಂಡದ ಮೊತ್ತ ಬ್ಯಾಂಕ್ ಖಾತೆಯಿಂದಲೇ ಕಡಿತ: ಹೊಸ ವ್ಯವಸ್ಥೆಗೆ ತೆಲಂಗಾಣ...

ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ದಂಡದ ಮೊತ್ತ ಬ್ಯಾಂಕ್ ಖಾತೆಯಿಂದಲೇ ಕಡಿತ: ಹೊಸ ವ್ಯವಸ್ಥೆಗೆ ತೆಲಂಗಾಣ ಸಿಎಂ ಸೂಚನೆ

ಹೈದರಾಬಾದ್: ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಮೇಲೆ ವಿಧಿಸುವ ದಂಡದ ಮೊತ್ತವನ್ನು ಬ್ಯಾಂಕ್ ಖಾತೆಯಿಂದಲೇ ನೇರವಾಗಿ ಕಡಿತ ಮಾಡಿಕೊಳ್ಳುವ ನಿಯಮ ಜಾರಿಗೆ ತೆಲಂಗಾಣ ಸರ್ಕಾರ ಮುಂದಾಗಿದೆ.

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಇಂತಹ ಹೊಸ ವ್ಯವಸ್ಥೆ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಸ್ತೆ ಸುರಕ್ಷತಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಸ್ತೆ ಸುರಕ್ಷತೆಯು ಆದ್ಯತೆಯಾಗಬೇಕಿದೆ. ಹಿಂದೆ ಕಾನೂನು ಸೌಹಾರ್ದತೆ ಮುಖ್ಯವಾಗಿತ್ತು. ಈಗ ಸಂಚಾರಿ ನಿಯಮಗಳು ಕೂಡ ಅಷ್ಟೇ ಮಹತ್ವದ್ದಾಗಿದೆ. ಹೀಗಾಗಿ ನಿಯಮ ಉಲ್ಲಂಘಿಸಿದವರಿಗೆ ವಿಧಿಸುವ ದಂಡದ ಮೊತ್ತವನ್ನು ನೇರವಾಗಿ ಸವಾರನ ಬ್ಯಾಂಕ್ ಖಾತೆಯಿಂದಲೇ ಕಡಿತಗೊಳಿಸಬೇಕು. ವಾಹನ ಸವಾರರ ಬ್ಯಾಂಕ್ ವಿವರಗಳನ್ನು ವಾಹನ ನೋಂದಣಿಯ ವೇಳೆ ಸೇರಿಸಬೇಕು ಎಂದು ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular