HomeLatest NewsBREAKING: ತೆಲಂಗಾಣದ ಎಲೆಕ್ಟ್ರಿಕ್ ಶಾಪ್ ನಲ್ಲಿ ಸಿಲಿಂಡರ್ ಸ್ಫೋಟ: ಮೂವರು ಸಾವು

BREAKING: ತೆಲಂಗಾಣದ ಎಲೆಕ್ಟ್ರಿಕ್ ಶಾಪ್ ನಲ್ಲಿ ಸಿಲಿಂಡರ್ ಸ್ಫೋಟ: ಮೂವರು ಸಾವು

ಹೈದರಾಬಾದ್: ಎಲೆಕ್ಟ್ರಿಕ್ ಶಾಪ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಪಾತಬಸ್ತಿಯಲ್ಲಿ ನಡೆದಿದೆ.

ಸಿಲಿಂಡರ್ ಸ್ಫೋಟದ ಭೀಕರತೆಗೆ ಎಲೆಕ್ಟ್ರಿಕ್ ಅಂಗಡಿ ಹೊರ ಭಾಗದಲ್ಲಿ ಕಾರಿನಲ್ಲಿ ಕುಳಿತಿದ್ದ ಚಾಲಕ ಕೂಡ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಅವಶೇಷಗಳು 100 ಮೀಟರ್ ಹೊರಕ್ಕೆ ಹಾರಿಬಿದ್ದಿವೆ.

ಸಿಲಿಂಡರ್ ಸ್ಫೋಟದ ಪರಿಣಾಮ ಎಲೆಕ್ಟ್ರಾನಿಕ್ ಶಾಪ್ ನಲ್ಲಿ ಎಸಿ ಕಾಂಪ್ರೆಸರ್, ಫ್ರಿಡ್ಜ್ ಗಳು ಕೂಡ ಸ್ಫೋಟಗೊಂಡಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular