BIG NEWS: ನಟ ಪವನ್ ಕಲ್ಯಾಣ ಗೆ ಮುಖಭಂಗ; ಠೇವಣಿ ಕಳೆದುಗೊಂಡ ಜನಸೇನಾ ಪಕ್ಷ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತದಿಂದ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಮ್ಯಾಜಿಕ್ ಸಂಖ್ಯೆ 60ನ್ನು ದಾಟಿರುವ ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ.

ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್ ಎಸ್ 38 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆಯಲ್ಲಿದೆ. ಇನ್ನು ಬಿಜೆಪಿ 9 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಸಿಎಂ ಅಭ್ಯರ್ಥಿ ರೇವಂತ ರೆಡ್ಡಿ ಕಾಮರೆಡ್ಡಿ ಹಾಗೂ ಕೊಡಂಗಲ್ ಎರಡೂ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಿದ್ದಾರೆ.

ಇನ್ನೊಂದೆಡೆ ನಟ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ ಠೇವಣಿ ಕಳೆದುಕೊಂಡಿದೆ. ತೆಲಂಗಾಣ ಚುನಾವಣೆಯಲ್ಲಿ ಜನಸೇನಾ ಪಕ್ಷದ 8 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಜನಸೇನಾ ಪಕ್ಷದ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದು, ಪವನ್ ಕಲ್ಯಾಣ್ ಗೆ ಮುಖಭಂಗವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read