ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ, ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕರಾಗಿರುವ ಮಹಮ್ಮದ್ ಅಜರುದ್ದೀನ್ ಅವರನ್ನು ತೆಲಂಗಾಣ ಸರ್ಕಾರ ಶನಿವಾರ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಲು ನಿರ್ಧರಿಸಿದೆ.
ಮಹಮ್ಮದ್ ಅಜರುದ್ದೀನ್ ಮತ್ತು ನಿವೃತ್ತ ಪ್ರಾಧ್ಯಾಪಕ ಎಂ. ಕೋದಂಡರಾಮ್ ಅವರನ್ನು ರಾಜ್ಯಪಾಲರ ಕೋಟಾದ ಅಡಿಯಲ್ಲಿ ವಿಧಾನಪರಿಷತ್ತಿಗೆ ನಾಮ ನಿರ್ದೇಶನ ಮಾಡಲು ನಿರ್ಧರಿಸಲಾಗಿದೆ. 2009ರಲ್ಲಿ ಕಾಂಗ್ರೆಸ್ ಪಕ್ಷದಿಂದ ಅಜರುದ್ದೀನ್ ಅವರು ಸಂಸದರಾಗಿದ್ದರು. ಇದೀಗ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಲು ನಿರ್ಧರಿಸಲಾಗಿದೆ.
ತೆಲಂಗಾಣ ಸಚಿವ ಸಂಪುಟವು ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರನ್ನು ಸರ್ಕಾರದ ಕೋಟಾದಡಿಯಲ್ಲಿ ಎಂಎಲ್‌ಸಿಯಾಗಿ ನಾಮನಿರ್ದೇಶನ ಮಾಡುವ ನಿರ್ಧಾರ ತೆಗೆದುಕೊಂಡಿದೆ. ಜುಬಿಲಿ ಹಿಲ್ಸ್ ಕ್ಷೇತ್ರದಲ್ಲಿ 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಅಜರುದ್ದೀನ್ ಅವರು ಈಗ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿಸಿದ್ದರು.