HomeIndiaದುಷ್ಕರ್ಮಿಗಳ ಅಟ್ಟಹಾಸ: KSRTC ಎರಡು ಬಸ್ ಗಳ ಮೇಲೆ ತೆಲಂಗಾಣದಲ್ಲಿ ಕಲ್ಲು ತೂರಾಟ

ದುಷ್ಕರ್ಮಿಗಳ ಅಟ್ಟಹಾಸ: KSRTC ಎರಡು ಬಸ್ ಗಳ ಮೇಲೆ ತೆಲಂಗಾಣದಲ್ಲಿ ಕಲ್ಲು ತೂರಾಟ

ಹೈದರಾಬಾದ್: ತೆಲಂಗಾಣದಲ್ಲಿ ದುಷ್ಕರ್ಮಿಗಳು ರಾಜ್ಯದ ಕೆ.ಎಸ್.ಆರ್.ಟಿ.ಸಿ ಬಸ್ ಗಳ ಮೇಲೆ ಕಲ್ಲು ತೂರಟ ನಡೆಸಿದ್ದಾರೆ.

ಕೆ.ಎಸ್.ಆರ್.ಟಿ.ಸಿಯ ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದೇ ವೇಳೆ ತೆಲಂಗಾಣ ಸಾರಿಗೆ ಸಂಸ್ಥೆಯ ಒಂದು ಬಸ್ ಹಾಗೂ ಖಾಸಗಿ ಬಸ್ ಮೇಲೆಯೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಹೈದರಾಬಾದ್ ನಿಂದ ಬೆಂಗಳೂಗೆ ಬರುತ್ತಿದ್ದ ವೇಳೆ ಶಂಶಾಬಾದ್ ಬಳಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಬಸ್ ನ ಗಾಜುಗಳು ಪುಡಿಪುಡಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಂಶಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular