Photo: ತಮ್ಮನಿಗೆ ‘ರಾಖಿ’ ಕಟ್ಟಿ ಕೊನೆಯುಸಿರೆಳೆದ ವಿದ್ಯಾರ್ಥಿನಿ; ಸಾವಿಗೆ ಕಾರಣವಾಯ್ತು ಯುವಕನ ಹುಚ್ಚು ಪ್ರೀತಿ…!

ರಕ್ಷಾ ಬಂಧನದ ದಿನ ಮನಕಲಕುವ ಘಟನೆಯೊಂದು ನಡೆದಿದೆ. ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿನಿ ಕೊನೆಯದಾಗಿ ತನ್ನ ಸಹೋದರನಿಗೆ ರಾಖಿ ಕಟ್ಟಿದ್ದಾಳೆ. ಆಸ್ಪತ್ರೆಯಲ್ಲೇ ರಾಖಿ ಕಟ್ಟಿದ ವಿದ್ಯಾರ್ಥಿನಿ ನಂತ್ರ ಇಹಲೋಕ ತ್ಯಜಿಸಿದ್ದಾಳೆ.

ನರಸಿಂಹುಲಪೇಟ್ ಮಂಡಲದ ಬುಡಕಟ್ಟು ಕುಗ್ರಾಮದ ನಿವಾಸಿಯಾಗಿರುವ ಅಪ್ರಾಪ್ತ ಬಾಲಕಿ ಕೊಡಾದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಪಾಲಿಟೆಕ್ನಿಕ್ ವಿದ್ಯಾರ್ಥಿನಿಯಾಗಿದ್ದಳು. ಯುವಕನೊಬ್ಬ ಆಕೆಯನ್ನು ಪ್ರೀತಿಸುವ ನೆಪದಲ್ಲಿ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇನ್ನಿಲ್ಲದ ಕಿರುಕುಳ ತಾಳಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು.

ಎರಡು ದಿನಗಳ ಹಿಂದೆ ಆಕೆ ಆತ್ಮಹತ್ಯೆಗೆ ಯತ್ನಿಸಿ ಕೀಟನಾಶಕ ಸೇವಿಸಿದ್ದಳು. ಕುಟುಂಬಸ್ಥರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಮಹಬೂಬಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ನಿನ್ನೆ ತಡರಾತ್ರಿ ವಿದ್ಯಾರ್ಥಿನಿ ತನ್ನ ತಮ್ಮನಿಗೆ ರಾಖಿ ಕಟ್ಟುವ ಆಸೆ ವ್ಯಕ್ತಪಡಿಸಿದ್ದಾಳೆ. ರಾಖಿ ಕಟ್ಟಿದ ಒಂದು ಗಂಟೆಯಲ್ಲೇ ಆಕೆ ಕೊನೆಯುಸಿರೆಳೆದಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ವಿದ್ಯಾರ್ಥಿನಿಗೆ ಹಿಂಸೆ ನೀಡ್ತಿದ್ದ ವ್ಯಕ್ತಿಯ ಪತ್ತೆ ಕಾರ್ಯ ಶುರು ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read