HomeIndiaಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಮತ್ತೊಂದು ಪ್ರಕರಣ: ಬ್ಯಾಡ್ಮಿಂಟನ್ ಆಡುವಾಗಲೇ ಬಂದೆರಗಿತ್ತು ಸಾವು

ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಮತ್ತೊಂದು ಪ್ರಕರಣ: ಬ್ಯಾಡ್ಮಿಂಟನ್ ಆಡುವಾಗಲೇ ಬಂದೆರಗಿತ್ತು ಸಾವು

ಇತ್ತೀಚಿನ ದಿನಗಳಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಹೈದರಾಬಾದಿನಲ್ಲಿ ಇಂಥವುದೇ ಮತ್ತೊಂದು ಘಟನೆ ಮಂಗಳವಾರ ಸಂಜೆ ನಡೆದಿದೆ.

38 ವರ್ಷದ ಶ್ಯಾಮ್ ಯಾದವ್ ಹೃದಯಘಾತದಿಂದ ಸಾವನ್ನಪ್ಪಿದ್ದು, ಇವರು ತಮ್ಮ ಕಚೇರಿಯಿಂದ ಬಂದ ಬಳಿಕ ಪ್ರತಿನಿತ್ಯವೂ ಸ್ನೇಹಿತರ ಜೊತೆ ಬ್ಯಾಡ್ಮಿಂಟನ್ ಆಡುತ್ತಿದ್ದರು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೇ ರೀತಿ ಮಂಗಳವಾರ ಸಂಜೆ ಲಾಲ್ ಪೇಟೆಯ ಪ್ರೊ. ಜಯಶಂಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಇವರು ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.

ಕೂಡಲೇ ಸ್ನೇಹಿತರು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಷ್ಟರೊಳಗಾಗಿ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular