HomeIndiaತಹಶಿಲ್ದಾರ್ ಕಚೇರಿಗೆ ಮಂತ್ರಿಯೊಬ್ಬರ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಶಾಕ್: ಶೌಚಾಲಯವನ್ನೇ ಸ್ವಚ್ಛಗೊಳಿಸಿದ ಸಚಿವ

ತಹಶಿಲ್ದಾರ್ ಕಚೇರಿಗೆ ಮಂತ್ರಿಯೊಬ್ಬರ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಶಾಕ್: ಶೌಚಾಲಯವನ್ನೇ ಸ್ವಚ್ಛಗೊಳಿಸಿದ ಸಚಿವ

ಹೈದರಾಬಾದ್: ಸಚಿವರೊಬ್ಬರು ತಹಶಿಲ್ದಾರ್ ಕಚೇರಿಯ ಶೌಚಾಲಯವನ್ನೇ ಸ್ವಚ್ಛಗೊಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತಹಶಿಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಜೂಪಲ್ಲಿ ಕೃಷ್ಣರಾವ್ ಅಲ್ಲಿರುವ ಅವ್ಯವಸ್ಥೆ, ಸ್ವಲ್ಪವೂ ಸ್ವಚ್ಛವಿಲ್ಲದ ವಾತಾವರಣ ಕಂಡು ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತೆಲಂಗಾಣ ಸಚಿವ ಜೂಪಲ್ಲಿ ಕೃಷ್ಣರಾವ್, ಪೆಂಟ್ಲವೆಲ್ಲಿ ತಹಶೀಲ್ದಾರ್ ಕಚೇರಿಗೆ ಏಕಾಏಕಿ ಭೇಟಿ ನೀಡಿದ್ದಾರೆ. ಈ ವೇಳೆ ಕಚೇರಿಯಲ್ಲಿನ ಅವ್ಯವಸ್ಥೆ, ಅಸ್ವಚ್ಛ ಶೌಚಾಲಯವನ್ನು ಕಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್ ಕಚೇರಿಯ ಶೌಚಾಲಯ ತೀರಾ ಕೊಳಕಾಗಿರುವುದನ್ನು ಕಂಡು ಕೆಂಡಾಮಂಡಲರಾದ ಸಚಿವರು, ಅಧಿಕಾರಿಗಳಿಗೆ ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಲ್ಲದೇ ತಾವೇ ಸ್ವತಃ ನೀರು ಸುರಿದು ಶೌಚಾಲಯ, ಶೌಚಾಲಯದ ಗೋಡೆಯನ್ನು ಸ್ವಚ್ಛಗೊಳಿಸುವ ಮೂಲಕ ಅಧಿಕಾರಿಗಳಿಗೆ ಸ್ವಚ್ಛತೆ ಬಗ್ಗೆ ಪಾಠ ಮಾಡಿದ್ದಾರೆ.

ಇದು ಸಾರ್ವಜನಿಕರು ಬಂದು ಹೋಗುವ ಸರ್ಕಾರಿ ಕಚೇರಿ. ಇಷ್ಟೊಂದು ಗಲೀಜಾಗಿ ಇಟ್ಟುಕೊಂಡರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ತಕ್ಷಣದಿಂದಲೇ ಕಚೇರಿಯ ಸ್ವಚ್ಛತೆಯನ್ನು ಕಾಪಾಡುವಂತೆ ವಾರ್ನಿಂಗ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಕಚೇರಿಯಲ್ಲಿದ್ದ ಕಂದಾಯ ಇಲಾಖೆಯ ಬಾಕಿ ಕಡತಗಳು ಹಾಗೂ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿದ ಸಚಿವರು, ಅರ್ಜಿ ವಿಲೇವಾರಿಯಲ್ಲಿ ವಿಳಂಬ ಧೋರಣೆಗೆ ಗರಂ ಆದರು. ಸಾರ್ವಜನಿಕ ಸೇವೆಗಳನ್ನು ಸಕಾಲಕ್ಕೆ ತಲುಪಿಸಬೇಕು, ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬಾರದು ಎಂದು ಅಧಿಕಾರಿಗಳಿಗೆ ಖಡಕ್ ಆಗಿ ಎಚ್ಚರಿಕೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular