HomeIndiaರೈತನಿಂದ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಪೊಲೀಸ್: ಸಬ್ ಇನ್ಸ್ ಪೆಕ್ಟರ್ ಅರೆಸ್ಟ್

ರೈತನಿಂದ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಪೊಲೀಸ್: ಸಬ್ ಇನ್ಸ್ ಪೆಕ್ಟರ್ ಅರೆಸ್ಟ್

ರೈತರಿಂದ ಲಂಚ ಪಡೆಯುತ್ತಿದ್ದಾಗ ಸಬ್ ಇನ್ಸ್ ಪೆಕ್ಟರ್ ಓರ್ವ ಸಿಕ್ಕಿ ಬಿದ್ದಿದ್ದು, ಆತನನ್ನು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ,

ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಸ್ಥಳೀಯ ರೈತರಿಂದ ಲಂಚ ಪಡೆದ ಆರೋಪ ಕೇಳಿಬಂದಿದೆ. ಕೃಷ್ಣಕುಮಾರ್ ಬಂಧಿತ ಸಬ್ ಇನ್ಸ್ ಪೆಕ್ಟರ್.

ಭೂವಿವಾದಕ್ಕೆ ಸಂಬಂಧಿಸಿದಂತೆ ಕೋಟ್ಯಯ್ಯ ಕ್ಯಾಂಪ್ ನಾಗರಾಜು ಎಂಬ ರೈತನಿಂದ ಸಬ್ ಇನ್ಸ್ ಪೆಕ್ಟರ್ ಕೃಷ್ಣಕುಮಾರ್ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. 20 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಬ್ ಇನ್ಸ್ ಪೆಕ್ಟರ್ ಕೃಷ್ಣಕುಮಾರ್ ಅವರನ್ನು ಎಸಿಬಿ ಬಂಧಿಸಿ, ವಿಚಾರಣೆ ನಡೆಸಿದೆ.

 

For Latest News Updates, Join Our Whatsapp Community🚩
RELATED ARTICLES

Most Popular