ತೆಲಂಗಾಣದ ಸೂರ್ಯಾಪೇಟ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಾವೆಲ್ಸ್ ಬಸ್‌ವೊಂದು ಕಂಟೇನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕೋದಾಡ ಮಂಡಲದ ದ್ವಾರಕಂಟ ಬಳಿ ಈ ದುರ್ಘಟನೆ ಸಂಭವಿಸಿದೆ. ಟ್ರಾವೆಲ್ಸ್ ಬಸ್ ಹೈದರಾಬಾದ್‌ನಿಂದ ಏಲೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಕರು ಒಳಗೆ ಸಿಲುಕಿಕೊಂಡು ಕಿರುಚಾಡಿದ್ದಾರೆ.
ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಬಸ್‌ನಿಂದ ಹೊರತೆಗೆದಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೋದಾಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ವೇಳೆ ಬಸ್‌ನಲ್ಲಿ ಒಟ್ಟು 42 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಮೃತರಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದಾರೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಅಪಘಾತದ ಪರಿಣಾಮ ಹೈದರಾಬಾದ್–ವಿಜಯವಾಡ ಹೆದ್ದಾರಿಯಲ್ಲಿ ಭಾರೀ ಪ್ರಮಾಣದ ಟ್ರಾಫಿಕ್ ಜಾಮ್ ಉಂಟಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

