ಭಯಾನಕ ಘಟನೆ: ʼಪ್ರೇಮʼ ನಿರಾಕರಿಸಿದ ಯುವತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಬೆದರಿಕೆ | Shocking Video

ತೆಲಂಗಾಣ: ತೆಲಂಗಾಣದ ಹುಜೂರ್‌ನಗರದಲ್ಲಿ ನಡೆದ ಭಯಾನಕ ಘಟನೆಯೊಂದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರೇಮ ನಿರಾಕರಿಸಿದ ಕಾರಣ ವ್ಯಕ್ತಿಯೊಬ್ಬ ಯುವತಿಯ ಮೇಲೆ ಪೆಟ್ರೋಲ್ ಸುರಿದು ತನ್ನನ್ನೂ ಮತ್ತು ಆಕೆಯನ್ನೂ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಘಟನೆ ಫೆಬ್ರವರಿ 10 ರಂದು ಸೂರ್ಯಪೇಟೆ ಜಿಲ್ಲೆಯ ಎನ್‌ಜಿಒ ಕಾಲೋನಿ ಪ್ರದೇಶದ ರಸ್ತೆಯ ಬದಿಯಲ್ಲಿ ನಡೆದಿದೆ.

ದೃಶ್ಯಾವಳಿಯಲ್ಲಿ, ವ್ಯಕ್ತಿಯು ಇಬ್ಬರು ಯುವತಿಯರೊಂದಿಗೆ ವಾಗ್ವಾದದಲ್ಲಿ ತೊಡಗಿರುವದನ್ನು ಕಾಣಬಹುದು. ನಂತರ ಅವನು ತನ್ನ ಮೇಲೆ ಪೆಟ್ರೋಲ್ ಸುರಿಯುತ್ತಾನೆ ಮತ್ತು ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕುತ್ತಾ ಒಬ್ಬ ಯುವತಿಯ ಮೇಲೆ ಪೆಟ್ರೋಲ್ ಸುರಿಯುತ್ತಾನೆ. ಪರಿಸ್ಥಿತಿ ಉಲ್ಬಣಗೊಳ್ಳುವ ಮೊದಲು, ಸ್ಥಳೀಯರು ಮಧ್ಯಪ್ರವೇಶಿಸಿ, ವ್ಯಕ್ತಿಯನ್ನು ವಶಪಡಿಸಿಕೊಂಡು ಸಂಭವನೀಯ ದುರಂತವನ್ನು ತಪ್ಪಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read