HomeIndiaಪುಸ್ತಕ ಖರೀದಿಗೆ ಹಣ ಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಪುಸ್ತಕ ಖರೀದಿಗೆ ಹಣ ಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಹೈದರಾಬಾದ್: ಪೋಷಕರು ಪುಸ್ತಕ ಖರೀದಿಸಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗೂಡೆಂ ಜಿಲ್ಲೆಯ ಬೆಂಡಲಪಾಡು ಗ್ರಾಮದಲ್ಲಿ ನಡೆದಿದೆ.

ಸುಧೀರ್ ಬಾಬು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಸುಧೀರ್ ಬಾಬು ತಾನು ಪುಸ್ತಕ ಖರೀದಿಸಬೇಕು ಹಣ ನೀಡುವಂತೆ ಪೋಷಕರನ್ನು ಕೇಳಿದ್ದನಂತೆ. ಆದರೆ ಪೋಷಕರು ನಿರಾಕರಿಸಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಮನನೊಂದ ವಿದ್ಯಾರ್ಥಿ ದುಡುಕಿನ ನಿರ್ಧರ ಕೈಗೊಂಡಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular