HomeLatest NewsBREAKING: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವು: ಮೂವರ ಸ್ಥಿತಿ...

BREAKING: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವು: ಮೂವರ ಸ್ಥಿತಿ ಗಂಭೀರ

ಹೈದರಾಬಾದ್: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾಅವನ್ನಪ್ಪಿರುವ ಘಟನೆ ನಡೆದಿದೆ.

ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಗೋದಾವರಿಖನಿಯಲ್ಲಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜೇಶ್ ಥಿಯೇಟರ್ ಬಳಿ ಈ ದುರ್ಘಟನೆ ನಡೆದಿದೆ. ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದ ಒಳಗೆ ನಾಲ್ವರು ಸಿಲುಕಿಕೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಶ್ರೀಧರ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಸಿಂಗರೇಣಿ ಕಾಲರೀಸ್ ಕಂಪನಿಯ ಉದ್ಯೋಗಿ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇತರ ಮೂವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಪೊಲೀಸರು ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular